alex Certify
ಕನ್ನಡ ದುನಿಯಾ       Mobile App
       

Kannada Duniya

ಗೆಳತಿ ಮೇಲೆ ಅತ್ಯಾಚಾರ ಎಸಗಿದ್ದ 11 ಮಂದಿ ಅರೆಸ್ಟ್

rape 26 a

ಸೂರತ್: ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿವೆ. ಅದರಲ್ಲಿಯೂ, ಪರಿಚಯಸ್ಥರು, ಸ್ನೇಹಿತರಿಂದಲೇ ಹೆಚ್ಚಾಗಿ ದೌರ್ಜನ್ಯ ನಡೆಯುತ್ತವೆ ಎಂಬುದಕ್ಕೆ ಹಲವಾರು ನಿದರ್ಶನಗಳಿವೆ. ಅಂತಹ ಪ್ರಕರಣವೊಂದರ ವರದಿ ಇಲ್ಲಿದೆ.

ಸೂರತ್ ವಲ್ಲಭ ವಿದ್ಯಾನಗರದ ಪೊಲೀಸರು, 11 ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಬಂಧಿತ ವಿದ್ಯಾರ್ಥಿಗಳು, ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಏಪ್ರಿಲ್ 21, 22 ರಂದು ಸೂರತ್ ದಮನ್ ಭೀಮಪುರದಿಂದ ಅಪಹರಿಸಿ, ವಿದ್ಯಾನಗರದ ಅಪಾರ್ಟ್ ಮೆಂಟ್ ಒಂದರಲ್ಲಿ ಕೂಡಿ ಹಾಕಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರೆನ್ನಲಾಗಿದೆ. ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂನಲ್ಲಿ ವಿದ್ಯಾರ್ಥಿನಿಯೊಂದಿಗೆ ಇವರೆಲ್ಲಾ ಸಂಪರ್ಕ ಹೊಂದಿದ್ದರು.

ಅಹಮದಾಬಾದ್, ಭಾವನಗರ್, ಸೂರತ್, ವಡೋದರಾ ಮೂಲದ ಈ 11 ವಿದ್ಯಾರ್ಥಿಗಳೆಲ್ಲಾ ಸೇರಿ ಆಕೆಯನ್ನು ಕಾರಿನಲ್ಲಿ ಅಪಹರಿಸಿ, ಅಪಾರ್ಟ್ ಮೆಂಟ್ ನಲ್ಲಿ ಕೂಡಿ ಹಾಕಿ ಅತ್ಯಾಚಾರ ಎಸಗಿದ್ದರು. ವಿಷಯ ಬಹಿರಂಗಪಡಿಸಿದರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಆಕೆ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, 11 ಮಂದಿಯನ್ನು ಬಂಧಿಸಿದ್ದಾರೆ. ವಿದ್ಯಾರ್ಥಿನಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಸಾಮೂಹಿಕ ಅತ್ಯಾಚಾರ ಎಸಗಿರುವುದು ತಿಳಿದು ಬಂದಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...