alex Certify
ಕನ್ನಡ ದುನಿಯಾ       Mobile App
       

Kannada Duniya

11 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ

11 ವರ್ಷದ ಬಾಲಕಿಯನ್ನು ಮನೆಯಿಂದ ಎಳೆದೊಯ್ದು ಆಕೆಯ ಮೇಲೆ ಗ್ಯಾಂಗ್ ರೇಪ್ ನಡೆಸಿ ಕೊಲೆ ಮಾಡಿರುವ ಘಟನೆ ಉತ್ತರಖಂಡ್ ನ ಉತ್ತರ ಕಾಶಿಯಲ್ಲಿ ನಡೆದಿದೆ. ಉತ್ತರ ಕಾಶಿಯಲ್ಲಿರುವ ಭಕ್ತಾದ್ ಗ್ರಾಮದಲ್ಲಿ ವಾಸವಾಗಿದ್ದ ಬಾಲಕಿಯನ್ನ ನಾಲ್ಕು ಮಂದಿ ಮನೆಯಿಂದ ಎಳೆದೊಯ್ದಿದ್ದಾರೆ. ರಾತ್ರಿ ವೇಳೆ ಆಕೆ ಮಲಗಿದ್ದ ಸಮಯದಲ್ಲಿ ಮನೆಯ ವಿದ್ಯುತ್ ಸಂಪರ್ಕ ಕಟ್ ಮಾಡಿ ಬಾಲಕಿಯನ್ನ ಅಪಹರಿಸಿದ್ದಾರೆ.

ಆನಂತರ ಆಕೆಯನ್ನ ಮನೆಯಿಂದ ದೂರ ಕರೆದೊಯ್ದು ನಾಲ್ಕು ಮಂದಿ ಗ್ಯಾಂಗ್ ರೇಪ್ ಮಾಡಿದ್ದಾರೆ. ಬಳಿಕ ಆಕೆಯನ್ನ ಕೊಂದು ಶವವನ್ನ ಸೇತುವೆಯೊಂದರ ಬಳಿ ಎಸೆದು ಹೋಗಿದ್ದಾರೆ.

ಪ್ರಕರಣದ ಸಂಬಂಧ ಪೊಲೀಸರು ನಾಲ್ವರು ಶಂಕಿತರನ್ನು ಬಂಧಿಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ. ಘಟನೆ ನಡೆದ ಬಳಿಕ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮಸ್ಥರು ಸೂಕ್ತ ರಕ್ಷಣೆ ಕಲ್ಪಿಸದ ಸ್ಥಳೀಯ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...