alex Certify
ಕನ್ನಡ ದುನಿಯಾ       Mobile App
       

Kannada Duniya

ಮಗುವಿಗೆ ಜನ್ಮ ನೀಡಿದ 11 ವರ್ಷದ ಬಾಲಕಿ

ರಾಜ್ ಕೋಟ್ ಸರ್ಕಾರಿ ಆಸ್ಪತ್ರೆಯಲ್ಲಿ 11 ವರ್ಷದ ಬಾಲಕಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿಯ ಮೇಲೆ 6 ಮಂದಿ ಪ್ರತ್ಯೇಕ ಘಟನೆಗಳಲ್ಲಿ ಅತ್ಯಾಚಾರ ಎಸಗಿದ್ದು, ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಶನಿವಾರ ಮತ್ತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಕ್ತಿನಗರ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥ ಬಾಲಕಿಯ ತಾಯಿ ದೂರು ನೀಡಿದ್ದು, ಮಾರ್ಚ್ 13 ರಂದು ನ್ಯಾಂಜೀ ಜಾವಿಯಾ(67), ಅರವಿಂದ್ ಕುಬವತ್(60) ಅವರನ್ನು ಬಂಧಿಸಲಾಗಿತ್ತು.

ಬಂಧಿತ 6 ಮಂದಿ ಪ್ರತ್ಯೇಕ ಸಂದರ್ಭದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ. 8 ತಿಂಗಳ ಗರ್ಭಿಣಿಯಾಗಿದ್ದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿ ಮತ್ತು ಮಗುವಿಗೆ ಆರೋಗ್ಯದ ಸಮಸ್ಯೆ ಇದ್ದು ಚಿಕಿತ್ಸೆ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...