alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕ್ ಆಗುವಂತಿದೆ 12 ವರ್ಷದ ಬಾಲಕಿ ಮಾಡಿರುವ ಕೃತ್ಯ

12 ವರ್ಷದ ಬಾಲಕಿಯೊಬ್ಬಳು ತನ್ನ ಬಾಯ್ ಫ್ರೆಂಡ್ ಜೊತೆಗೊಡಿ ಸಾಕುತಾಯಿಯನ್ನೇ ಹತ್ಯೆ ಮಾಡಿರುವ ಘಟನೆ ಫತೇಪುರ್ ನಲ್ಲಿ ನಡೆದಿದೆ.

7 ನೇ ತರಗತಿ ಓದುತ್ತಿದ್ದ ಬಾಲಕಿ, ತನ್ನ ಶಾಲೆಯಲ್ಲೇ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಂದಿಗೆ ಸ್ನೇಹ ಹೊಂದಿದ್ದು, ಇದಕ್ಕೆ ಆಕ್ಷೇಪಿಸಿದ್ದ ಸಾಕುತಾಯಿ ಬಾಲಕಿಗೆ ಕಪಾಳಮೋಕ್ಷ ಮಾಡಿ ಅವಮಾನಿಸಿದ್ದಕ್ಕೆ ಪ್ರತೀಕಾರವಾಗಿ ಈ ಕೃತ್ಯ ಎಸಗಲಾಗಿದೆ.

ಭಾನುವಾರ ಮಧ್ಯರಾತ್ರಿ ತನ್ನ ಗೆಳೆಯನನ್ನು ಮನೆಗೆ ಕರೆಸಿಕೊಂಡಿದ್ದ ಬಾಲಕಿ ಆತನ ನೆರವಿನಿಂದ ನಿದ್ರೆಯಲ್ಲಿದ್ದ ಸಾಕು ತಾಯಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದು, ಬಳಿಕ ಆತನೊಂದಿಗೆ ಅಲ್ಲಿಂದ ತೆರಳಿದ್ದಳು. ಮಾರನೆಯ ದಿನ ಮನೆಗೆ ಬಂದ ಬಾಲಕಿ, ನೆರೆಹೊರೆಯವರ ಬಳಿ ತನ್ನ ತಾಯಿ ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಹೇಳಿದ್ದಳು. ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ವೈದ್ಯರು ಈಗಾಗಲೇ ಮೃತಪಟ್ಟಿದ್ದಾರೆಂದು ಘೋಷಿಸಿದ್ದರು.

ಅನಾರೋಗ್ಯದಿಂದ ಮಹಿಳೆ ಮೃತಪಟ್ಟಿದ್ದಾರೆಂದು ಭಾವಿಸಿದ ನೆರೆಹೊರೆಯವರು ಮುಂಬೈನಲ್ಲಿದ್ದ ಮಹಿಳೆ ಪತಿಗೆ ವಿಷಯ ಮುಟ್ಟಿಸಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಿದ್ದರು. ಆದರೆ ಮಹಿಳೆ ಸಾವಿನ ಕುರಿತು ಅನುಮಾನಗೊಂಡವರೊಬ್ಬರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಪೋಲಿಸರು ಬಾಲಕಿಯನ್ನು ವಶಕ್ಕೆ ಪಡೆದು ವಿಚಾರಿಸಿದ ವೇಳೆ ಸತ್ಯಾಂಶ ಬೆಳಕಿಗೆ ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...