alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸರ ನಿರ್ಲಕ್ಷ್ಯದಿಂದ ನೊಂದು ಅತ್ಯಾಚಾರ ಸಂತ್ರಸ್ಥೆ ಬಾಲಕಿ ಆತ್ಮಹತ್ಯೆ

ಉತ್ತರ ಪ್ರದೇಶದ ಭಾಗ್ಪತ್ ಜಿಲ್ಲೆಯಲ್ಲಿ ಅತ್ಯಾಚಾರ ಸಂತ್ರಸ್ಥ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೂರು ನೀಡಿದ್ದರೂ ಪೊಲೀಸರು ಆರೋಪಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ದೂರು ವಾಪಸ್ ಪಡೆಯದೇ ಇದ್ದಲ್ಲಿ ಮತ್ತೊಮ್ಮೆ ಅತ್ಯಾಚಾರ ಮಾಡುವುದಾಗಿ ಆ ಕಾಮುಕ ಬೆದರಿಕೆ ಹಾಕಿದ್ದ. ಕಳೆದ ಜುಲೈ 5ರಂದು ಐವರು ಕಾಮುಕರು ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿದ್ದರು. ನಂತರ ಸಾಮೂಹಿಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರು. 5 ದಿನಗಳ ನಂತರ ಬಾಲಕಿಯನ್ನು ಗ್ರಾಮದ ಹೊರವಲಯದಲ್ಲಿ ಬಿಸಾಡಲಾಗಿತ್ತು. ಈ ಬಗ್ಗೆ ಎಫ್ ಐ ಆರ್ ದಾಖಲಾಗಿತ್ತು.

ಸಬ್ ಇನ್ಸ್ ಪೆಕ್ಟರ್ ಅಜಯ್ ಕುಮಾರ್ ಗೆ ತನಿಖೆಯ ಜವಾಬ್ಧಾರಿ ವಹಿಸಲಾಗಿತ್ತು. ಆದ್ರೆ ಪೊಲೀಸರು ಆರೋಪಿಗಳನ್ನು ಬಂಧಿಸಿರಲಿಲ್ಲ. ಬಿಂದಾಸ್ ಆಗಿ ಓಡಾಡಿಕೊಂಡಿದ್ದ ಕಾಮಾಂಧರು, ಬಾಲಕಿ ಮತ್ತಾಕೆಯ ಪೋಷಕರಿಗೆ ಬೆದರಿಕೆ ಹಾಕುತ್ತಿದ್ರು. ಶುಕ್ರವಾರ ಮಾರ್ಕೆಟ್ ಗೆ ಹೋಗಿದ್ದ ಬಾಲಕಿ ಮೇಲೆ ಹಲ್ಲೆ ಕೂಡ ನಡೆದಿತ್ತು.

ಈ ಘಟನೆಗಳಿಂದ ಮತ್ತಷ್ಟು ನೊಂದ ಬಾಲಕಿ ಫ್ಯಾನ್ ಗೆ ನೇಣು ಬಿಗಿದುಕೊಂಡಿದ್ದಾಳೆ. ಕಳೆದ ತಿಂಗಳು ಜನತಾ ದರ್ಬಾರ್ ನಲ್ಲಿ ಸಿಎಂ ಯೋಗಿ ಆದಿತ್ಯನಾಥ್ ರನ್ನು ಭೇಟಿ ಮಾಡಿದ್ದ ಬಾಲಕಿ ಪೋಷಕರು ನ್ಯಾಯಕ್ಕಾಗಿ ಮನವಿ ಮಾಡಿದ್ದರು. ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಸಿಎಂ ಯೋಗಿ ಸೂಚನೆ ನೀಡಿದ್ದರು. ಆದ್ರೆ ಪೊಲೀಸರು ಮಾತ್ರ ಆರೋಪಿಗಳನ್ನು ಬಂಧಿಸಿರಲಿಲ್ಲ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...