alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸರ ಸೋಗಿನಲ್ಲಿ ಯುವತಿ ಮೇಲೆ ರೇಪ್

ಆರಕ್ಷಕರ‌ ಸೋಗಿನಲ್ಲಿ ಬಂದ ಇಬ್ಬರು ಕಾಮುಕರು ಯುವತಿಯರ ಮೇಲೆ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ಭಾನುವಾರ ರಾತ್ರಿ ದೆಹಲಿಯ ಕನ್ಜಾವಾಲ ಭಾಗದಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಯುವತಿ ಹಾಗೂ ಸಂಬಂಧಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರ ಸೋಗಿನಲ್ಲಿದ್ದ ಆರೋಪಿಗಳ ಪತ್ತೆಗೆ ದೆಹಲಿ ಪೊಲೀಸರು ಬಲೆ ಬೀಸಿದ್ದಾರೆ.

ದೂರಿನಲ್ಲಿ ಯುವತಿ, ಭಾನುವಾರ ರಾತ್ರಿ ಸಂಬಂಧಿಯೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ ಇಬ್ಬರು ಯುವಕರು ಪೊಲೀಸ್ ವೇಷದಲ್ಲಿ ಬಂದು ನನ್ನೊಂದಿಗೆ ಮಾತನಾಡಲು ಶುರು ಮಾಡಿದರು‌. ಬಳಿಕ ಅತ್ಯಾಚಾರ ಎಸಗಿದರು‌. ಈ ವೇಳೆ ನನ್ನೊಂದಿಗಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರು ಎಂದು 20 ವರ್ಷದ ಸಂತ್ರಸ್ತೆ ಹೇಳಿದ್ದಾಳೆ.

ಪ್ರಕರಣ ಸಂಬಂಧ ಸಂತ್ರಸ್ತೆಯ ಆರೋಗ್ಯ ತಪಾಸಣೆ ನಡೆಸಿದ್ದು, ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ದಾಖಲಿಸಲಾಗಿದೆ‌. ಆರೋಪಿಗಳನ್ನು ಹಿಡಿಯಲು ಬಲೆ ಬೀಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...