alex Certify
ಕನ್ನಡ ದುನಿಯಾ       Mobile App
       

Kannada Duniya

ಕಂದಕಕ್ಕುರುಳಿದ ಬಸ್: 20 ಕ್ಕೂ ಅಧಿಕ ಮಂದಿ ಸಾವು

ಉತ್ತರಾಖಂಡದ ಪೌರಿ ಗಡ್ವಾರ್ ಜಿಲ್ಲೆಯ ಧುಮಾಕೋಟ್ ಬಳಿ ಬಸ್ ಕಂದಕಕ್ಕುರುಳಿದೆ. ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 20 ಮಂದಿ ಸಾವನ್ನಪ್ಪಿದ್ದಾರೆ. ಬಸ್ ರಾಮ್ನಗರಕ್ಕೆ ಹೋಗ್ತಿತ್ತು ಎನ್ನಲಾಗಿದೆ.

ಪೊಲೀಸ್ ಪ್ರಕಾರ ರಕ್ಷಣಾ ಕಾರ್ಯ ನಡೆಯುತ್ತಿದೆ. 20 ಶವವನ್ನು ಬಸ್ ನಿಂದ ಹೊರಗೆ ತೆಗೆಯಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸತ್ತವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿರುವ ಮುಖ್ಯಮಂತ್ರಿ ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...