alex Certify
ಕನ್ನಡ ದುನಿಯಾ       Mobile App
       

Kannada Duniya

ಪರೀಕ್ಷೆ ವೇಳೆ ಸಿಕ್ಕ ಕಾಪಿ ಚೀಟಿಗಳ ತೂಕವೆಷ್ಟು ಗೊತ್ತಾ?

ರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳು ನಕಲು ಮಾಡದಂತೆ ತಡೆಗಟ್ಟಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಆದರೂ ಕೆಲ ವಿದ್ಯಾರ್ಥಿಗಳು ಪರೀಕ್ಷಾ ಮೇಲ್ವಿಚಾರಕರ ಕಣ್ತಪ್ಪಿಸಿ ಕಾಪಿ ಹೊಡೆಯುವುದರಲ್ಲಿ ಯಶಸ್ವಿಯಾಗುತ್ತಾರೆ.

ದುರ್ದೈವದ ಸಂಗತಿಯೆಂದರೆ ಕೆಲವೊಮ್ಮೆ ಪರೀಕ್ಷಾ ಕೇಂದ್ರಗಳೇ ವಿದ್ಯಾರ್ಥಿಗಳಿಗೆ ಕಾಪಿ ಹೊಡೆಯಲು ಪ್ರೋತ್ಸಾಹಿಸುತ್ತಾರೆ. ಆ ಮೂಲಕ ತಮ್ಮ ಶಾಲಾ-ಕಾಲೇಜಿಗೆ ಉತ್ತಮ ಫಲಿತಾಂಶ ಬರುವಂತೆ ನೋಡಿಕೊಳ್ಳುತ್ತಾರೆ. ಅಂತಹ ಘಟನೆಯೊಂದರ ವರದಿ ಇಲ್ಲಿದೆ.

ಗುಜರಾತಿನಲ್ಲಿ ಕೆಲ ದಿನಗಳ ಹಿಂದೆ 12ನೇ ತರಗತಿಯ ಪರೀಕ್ಷೆಗಳು ನಡೆದಿದ್ದು, ಜುನಾಗಡ ಜಿಲ್ಲೆಯ ವಂತಾಲಿನಗರದ ಕೆಲ ಪರೀಕ್ಷಾ ಕೇಂದ್ರಗಳಲ್ಲಿ ಭಾರಿ ಅಕ್ರಮ ನಡೆದಿರುವುದು ಬಯಲಾಗಿದೆ.

ಈ ಪಟ್ಟಣದ ಹಲವು ಪರೀಕ್ಷಾ ಕೇಂದ್ರಗಳಿಗೆ ಮೇಲ್ವಿಚಾರಕರು ಭೇಟಿ ನೀಡಿದ ವೇಳೆ ಸಿಕ್ಕ ಕಾಪಿ ಚೀಟಿಗಳು ಬರೋಬ್ಬರಿ 200 ಕೆಜಿ ತೂಗಿದೆ. ಇಷ್ಟೊಂದು ವ್ಯಾಪಕ ಪ್ರಮಾಣದಲ್ಲಿ ಕಾಪಿ ಮಾಡಲು ವಿದ್ಯಾರ್ಥಿಗಳು ಮುಂದಾಗಿದ್ದಾರೆ ಎಂಬ ಸಂಗತಿ ಅಧಿಕಾರಿಗಳನ್ನು ದಂಗಾಗುವಂತೆ ಮಾಡಿದೆ. ಇದೀಗ ಕೆಲ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಅಕ್ರಮ ನಡೆಸಲು ಸಹಕರಿಸುತ್ತಿದ್ದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...