alex Certify
ಕನ್ನಡ ದುನಿಯಾ       Mobile App
       

Kannada Duniya

ಡ್ಯಾನ್ಸರ್ ಮೇಲೆ ಅತ್ಯಾಚಾರವೆಸಗಿದ್ದ ನಾಲ್ವರ ಅರೆಸ್ಟ್

crime_against_women2ಪ್ರತಿಷ್ಟಿತ ಹೋಟೆಲ್ ಒಂದರಲ್ಲಿ ಕಾರ್ಯಕ್ರಮ ನೀಡಲು ಬಂದಿದ್ದ ಡ್ಯಾನ್ಸ್ ತಂಡದಲ್ಲಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ನಾಲ್ವರನ್ನು ಉತ್ತರ ಪ್ರದೇಶದ ಲಕ್ನೋ ಪೊಲೀಸರು ಬಂಧಿಸಿದ್ದಾರೆ.

ಕಂಪನಿಯೊಂದು ತನ್ನ ನೌಕರರಿಗೆ ಲಕ್ನೋದ ‘ಹೋಟೆಲ್ ಎಕ್ಸೋಟಿಕಾ’ ದಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಇದರ ಅಂಗವಾಗಿ ನೃತ್ಯ ತಂಡ ಆಗಮಿಸಿದ್ದು, ಕಂಪನಿಯ ಮಾರಾಟ ಪ್ರತಿನಿಧಿಗಳಾದ ಸತ್ವೀರ್ ಶರ್ಮಾ, ಫಾರೇಶ್ ತೋಮರ್, ರಾಷ್ಟ್ರಭೂಷಣ್ ಭಾರ್ತಿ ಹಾಗೂ ದೇವರಾಜ್ ಸಿಂಗ್ ಎಂಬವರು ಮಹಿಳಾ ಡ್ಯಾನ್ಸರ್ ಮೇಲೆ ಹೋಟೆಲ್ ಕೊಠಡಿಯಲ್ಲಿ ಅತ್ಯಾಚಾರವೆಸಗಿದ್ದಾರೆಂದು ಆರೋಪಿಸಲಾಗಿತ್ತು.

ಮೊದಲಿಗೆ ದೂರು ಸ್ವೀಕರಿಸಲು ನಿರಾಕರಿಸಿದ್ದ ಪೊಲೀಸರು, ಅತ್ಯಾಚಾರಕ್ಕೊಳಗಾದ ಯುವತಿ ಮಾಧ್ಯಮಗಳ ಮುಂದೆ ತನ್ನ ನೋವನ್ನು ತೋಡಿಕೊಂಡ ಬಳಿಕ ಎಚ್ಚೆತ್ತುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಲ್ಲದೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಅನುಮತಿ ಪಡೆಯದೆ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಹೋಟೆಲ್ ಮ್ಯಾನೇಜರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅತ್ಯಾಚಾರಕ್ಕೊಳಗಾದ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...