alex Certify
ಕನ್ನಡ ದುನಿಯಾ       Mobile App
       

Kannada Duniya

ಜೀಪ್ ಗೆ ಖಾಸಗಿ ಬಸ್ ಡಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಜೀಪ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಪೆಲ್ಲಕೂರು ಸಮೀಪದ ನಾಯ್ಡುಪೇಟಾ-ಶ್ರೀಕಾಳಹಸ್ತಿ ಹೆದ್ದಾರಿಯಲ್ಲಿ ನಡೆದಿದೆ.

ಮೃತಪಟ್ಟವರೆಲ್ಲರೂ ಗುಂಟೂರು ಜಿಲ್ಲೆಯ ಬೊಲ್ಲಪಲ್ಲಿ ಮಂಡಲ್ ವ್ಯಾಪ್ತಿಯ ನಾಯ್ಡುಪಾಲೇಮ್ ಗ್ರಾಮದವರೆಂದು ಹೇಳಲಾಗಿದ್ದು, ತಿಮ್ಮಪ್ಪನ ದರ್ಶನಕ್ಕಾಗಿ ಜೀಪ್ ನಲ್ಲಿ ತಿರುಪತಿಗೆ ತೆರಳುತ್ತಿದ್ದರೆಂದು ತಿಳಿದುಬಂದಿದೆ.

ಶನಿವಾರ ಬೆಳಗಿನ ಜಾವ ಈ ಅಪಘಾತ ಸಂಭವಿಸಿದ್ದು, ಮೃತಪಟ್ಟವರಲ್ಲಿ ಜೀಪ್ ಚಾಲಕ ಕೂಡಾ ಸೇರಿದ್ದಾನೆ. ಗಾಯಾಳುಗಳನ್ನು ನಾಯ್ಡುಪೇಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...