alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್! 4 ವರ್ಷದ ಬಾಲಕನ ಮೇಲೆ ದಾಖಲಾಗಿದೆ ರೇಪ್ ಕೇಸ್

ವಿಲಕ್ಷಣ ಪ್ರಕರಣವೊಂದರಲ್ಲಿ ನಾಲ್ಕು ವರ್ಷದ ಬಾಲಕನೊಬ್ಬ ತನ್ನದೇ ತರಗತಿಯ ವಿದ್ಯಾರ್ಥಿನಿ ಮೇಲೆ ಶಾಲೆಯಲ್ಲೇ ಲೈಂಗಿಕ ಕಿರುಕುಳ ನಡೆಸಿದ್ದಾನೆಂಬ ದೂರು ಕೇಳಿ ಬಂದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಾಲಕನ ವಿರುದ್ದ ಯಾವ ಕ್ರಮ ಕೈಗೊಳ್ಳಬೇಕೆಂಬ ಗೊಂದಲದಲ್ಲಿದ್ದಾರೆ.

ಪಶ್ಚಿಮ ದೆಹಲಿಯ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಈ ಶಾಲೆಯಲ್ಲಿ ಓದುತ್ತಿದ್ದ ಬಾಲಕಿಯೊಬ್ಬಳು ತನ್ನ ತಾಯಿ ಬಳಿ ಹೊಟ್ಟೆ ನೋವೆಂದು ಹೇಳಿದ್ದಾಳೆ. ಮೊದಲಿಗೆ ಇದನ್ನು ನಿರ್ಲಕ್ಷಿಸಿದ್ದ ಬಾಲಕಿಯ ತಾಯಿ, ಆಕೆ ನೋವಿನಿಂದ ಜೋರಾಗಿ ಅಳಲಾರಂಭಿಸಿದಾಗ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಪರೀಕ್ಷಿಸಿದ ವೈದ್ಯರು ಬಾಲಕಿಯ ಖಾಸಗಿ ಅಂಗಕ್ಕೆ ಗಾಯವಾಗಿರುವುದನ್ನು ಪತ್ತೆ ಹಚ್ಚಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಲಕಿ ತನ್ನ ತಾಯಿ ಬಳಿ ಸಹಪಾಠಿಯೇ ಈ ರೀತಿ ಮಾಡಿದ್ದಾಗಿ ಹೇಳಿಕೊಂಡಿದ್ದು, ಆದರೆ ವೈದ್ಯರು ನಾಲ್ಕು ವರ್ಷದ ಬಾಲಕನಲ್ಲಿ ಲೈಂಗಿಕ ಭಾವನೆಗಳಿರುವ ಸಾಧ್ಯತೆಗಳಿಲ್ಲವೆಂದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ವಯಸ್ಸಿನ ಕಾರಣಕ್ಕಾಗಿ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂಬುದರ ಕುರಿತು ಗೊಂದಲಕ್ಕೀಡಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...