alex Certify
ಕನ್ನಡ ದುನಿಯಾ       Mobile App
       

Kannada Duniya

ನಿಗೂಢವಾಗಿ ಸಾವನ್ನಪ್ಪಿದ ಕಿರು ತೆರೆ ನಟಿ

photo-courtesy-dcಕಿರು ತೆರೆ ಹಾಗೂ ಜಾಹೀರಾತುಗಳಲ್ಲಿ ನಟಿಸಿದ್ದ ನಟಿಯೊಬ್ಬರು ತಮ್ಮ ನಿವಾಸದಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. 49 ವರ್ಷದ ಜಯಶೀಲಿ ಸಾವನ್ನಪ್ಪಿದವರಾಗಿದ್ದು, ಮನೆಯಲ್ಲಿದ್ದ ಚಿನ್ನಾಭರಣಗಳು ಸಹ ಕಾಣೆಯಾಗಿವೆ ಎಂದು ನಟಿಯ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ.

ಮೂಲತಃ ಸೇಲಂನವರಾದ ಜಯಶೀಲಿ ಚೆನ್ನೈನ ಪೆರಿಯಾರ್ ಸ್ಟ್ರೀಟ್ ನಲ್ಲಿ ವಾಸಿಸುತ್ತಿದ್ದು, ಭಾನುವಾರದಂದು ಅವರ ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ನೆರೆಮನೆಯ ನಿವಾಸಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ ವೇಳೆ ಘಟನೆ ಬೆಳಕಿಗೆ ಬಂದಿದೆ.

ಹಾಸಿಗೆ ಮೇಲೆ ನಟಿಯ ದೇಹ ಬೆತ್ತಲೆಯಾಗಿ ಬಿದ್ದಿದ್ದು, ಮನೆಯೊಳಗೆ ಬಲವಂತವಾಗಿ ಪ್ರವೇಶಿಸಿರುವ ಯಾವುದೇ ಕುರುಹು ಕಂಡು ಬಂದಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ ನಟಿಯ ಹತ್ಯೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಪರಿಚಿತರೇ ಈ ಕೃತ್ಯವೆಸಗಿರಬಹುದೆಂದು ಹೇಳಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ವಿರುಗಬಾಕಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...