alex Certify
ಕನ್ನಡ ದುನಿಯಾ       Mobile App
       

Kannada Duniya

80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ

ದೇಶದಲ್ಲಿ ಅತ್ಯಾಚಾರ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧ ಮಹಿಳೆಯವರೆಗೆ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ಪುಣೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ನಡೆದ ಪ್ರಕರಣ ಬೆಳಕಿಗೆ ಬಂದಿದೆ.

ಪುಣೆಯಿಂದ 25 ಕಿಲೋಮೀಟರ್ ದೂರದಲ್ಲಿರುವ ತಲಾವೆಡೆ ಗ್ರಾಮದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ವೃದ್ಧೆ ಮೇಲೆ ಅತ್ಯಾಚಾರವೆಸಗಿದ್ದಾನೆ. ಘಟನೆ ಜನವರಿ 12-13ರ ಮಧ್ಯರಾತ್ರಿ ನಡೆದಿದೆ ಎಂದು ಶನಿವಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಶನಿವಾರ ಮಹಿಳೆ ಮಗನ ಜೊತೆ ಬಂದು ಪೊಲೀಸರಿಗೆ ದೂರು ನೀಡಿದ್ದಾಳೆ ಎನ್ನಲಾಗಿದೆ.

ಮಗ ಮನೆಗೆ ಬರ್ತಿದ್ದಂತೆ ವೃದ್ಧೆ ವಿಷ್ಯ ತಿಳಿಸಿದ್ದಾಳೆ. ಮಗ, ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ವೈದ್ಯಕೀಯ ಪರೀಕ್ಷೆ ನಡೆಸಿದ ಅಧಿಕಾರಿಗಳು ಅತ್ಯಾಚಾರದ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...