alex Certify
ಕನ್ನಡ ದುನಿಯಾ       Mobile App
       

Kannada Duniya

ಹೊಟ್ಟೆ ನೋವಿಂದ ಬಳಲ್ತಿದ್ದ ಬಾಲಕಿ ಪರೀಕ್ಷೆ ಮಾಡಿ ದಂಗಾದ ವೈದ್ಯರು

13 ವರ್ಷದ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ವೈದ್ಯರು ಬಾಲಕಿ ಪರೀಕ್ಷೆ ಮಾಡಿದ್ದಾರೆ. ಬಂದ ವರದಿ ನೋಡಿ ವೈದ್ಯರೊಂದೇ ಅಲ್ಲ ಕುಟುಂಬಸ್ಥರು ದಂಗಾಗಿ ಹೋಗಿದ್ದಾರೆ. ಘಟನೆ ಉತ್ತರ ಪ್ರದೇಶದ ಸಹರಾನ್ಪುರ್ ಜಿಲ್ಲೆಯಲ್ಲಿ ನಡೆದಿದೆ.

ಏಳನೇ ತರಗತಿ ವಿದ್ಯಾರ್ಥಿ ಮೇಲೆ ಕಳೆದ ನಾಲ್ಕು ತಿಂಗಳಿಂದ ಅತ್ಯಾಚಾರ ನಡೆದಿದೆ. ಅದೇ ಗ್ರಾಮದ ಯುವಕ ಹೆದರಿಸಿ ಅತ್ಯಾಚಾರವೆಸಗಿದ್ದಾನೆ. ಬಾಲಕಿ ಎರಡು ತಿಂಗಳ ಗರ್ಭಿಣಿಯಾಗಿದ್ದಾಳೆ. ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣ ಪಾಲಕರು ಆಸ್ಪತ್ರೆಗೆ ತೋರಿಸಿದ್ದಾರೆ. ಈ ವೇಳೆ ಬಾಲಕಿ ಗರ್ಭಿಣಿ ಎಂಬ ವಿಷ್ಯ ಗೊತ್ತಾಗಿದೆ.

ಪೀಡಿತ ಬಾಲಕಿ ತಂದೆ ಸಾಮಾಜಿಕ ಕಾರ್ಯಕರ್ತ ಎನ್ನಲಾಗಿದೆ. ತಾಯಿ ನರ್ಸ್ ಕೋರ್ಸ್ ಮಾಡ್ತಿದ್ದಾಳೆ. ವೈದ್ಯಕೀಯ ವರದಿ ಬಂದ ನಂತ್ರ ಬಾಲಕಿ ಎಲ್ಲ ಸಂಗತಿಯನ್ನೂ ಪಾಲಕರ ಮುಂದೆ ಹೇಳಿದ್ದಾಳೆ. ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ದೂರು ದಾಖಲಾಗಿದೆ. ಶೀಘ್ರದಲ್ಲಿಯೇ ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ಹೇಳಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...