alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ 3 ಮಂದಿ ಸಾವು

accident-22

ಮಂಡ್ಯ: ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆ ವ್ಯಾಪ್ತಿಯ ಎಲೆಕೆರೆ ಹ್ಯಾಂಡ್ ಪೋಸ್ಟ್ ಬಳಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಮೃತಪಟ್ಟಿದ್ದಾನೆ. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಲಾರಿ ಹಾಗೂ ಬಸ್ ಚಾಲಕರು ವೇಗವಾಗಿ ಚಾಲನೆ ಮಾಡಿಕೊಂಡು ಬಂದಿದ್ದು, ನಿಯಂತ್ರಣ ತಪ್ಪಿದ ವಾಹನಗಳು ಡಿಕ್ಕಿ ಹೊಡೆದುಕೊಂಡಿವೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...