alex Certify
ಕನ್ನಡ ದುನಿಯಾ       Mobile App
       

Kannada Duniya

ಆಟೋದಲ್ಲಿ ಹೋಗ್ತಿದ್ದ ಯುವತಿ ಮೇಲೆ ಆಸಿಡ್ ದಾಳಿ

ದೆಹಲಿ ಸಮೀಪದ ಘಾಜಿಯಾಬಾದ್ ನಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರೆದಿದೆ. ದಿನ ದಿನಕ್ಕೂ ಅಪರಾಧ ಪ್ರಕರಣ ಹೆಚ್ಚಾಗ್ತಿದೆ. ಮಂಗಳವಾರ ಮತ್ತೊಂದು ಘಟನೆ ನಡೆದಿದೆ.

ಸಾಹಿಬಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋಹನ್ ನಗರದಲ್ಲಿ ಎರಡು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಆಟೋದಲ್ಲಿ ಸಂಚರಿಸುತ್ತಿದ್ದ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಯುವತಿ ಸೇರಿದಂತೆ 7 ಮಂದಿ ಗಾಯಗೊಂಡಿದ್ದಾರೆ. ಯುವತಿ ಸ್ಥಿತಿ ಗಂಭೀರವಾಗಿದೆ ಎನ್ನಲಾಗ್ತಿದೆ.

ಗಾಯಾಳುಗಳನ್ನು ನರೇಂದ್ರ ಮೋಹನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಡಿತ ಯುವತಿ ಹೆಸರು ಭಾವನ ಎನ್ನಲಾಗಿದೆ. ಈಕೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಕೆಲಸ ಮಾಡ್ತಿದ್ದಾಳೆ. 25 ವರ್ಷದ ಭಾವನಾ ಪರಿಚಯದವರೇ ಈ ಕೆಲಸ ಮಾಡಿದ್ದಾರೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ದೆಹಲಿ ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆಯಿದೆ. ಯುವತಿಯನ್ನು ಆಟೋ ಹಿಂಬಾಲಿಸಿ ಬಂದು ಎಸಿಡ್ ದಾಳಿ ನಡೆಸಿದ ದುಷ್ಕರ್ಮಿಗಳು ನಾಪತ್ತೆಯಾಗಿದ್ದಾರೆ. ಕೈ, ಕುತ್ತಿಗೆ ಹಾಗೂ ಹೊಟ್ಟೆ ಮೇಲೆ ಆ್ಯಸಿಡ್ ಬಿದ್ದಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

 

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...