alex Certify
ಕನ್ನಡ ದುನಿಯಾ       Mobile App
       

Kannada Duniya

ಚಲಿಸುತ್ತಿದ್ದ ರೈಲಿನಲ್ಲೇ ನಡೀತು ಹೀನ ಕೃತ್ಯ

Acid thrown on woman on Kanpur-Prayag Express for resisting rape attemptಉತ್ತರ ಪ್ರದೇಶದಲ್ಲೊಂದು ಹೇಯ ಕೃತ್ಯ ನಡೆದಿದೆ. ಚಲಿಸುತ್ತಿದ್ದ ರೈಲಿನಲ್ಲೇ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರವೆಸಗಲು ಮುಂದಾಗಿದ್ದ ದುಷ್ಕರ್ಮಿಗಳು, ಅದಕ್ಕೆ ಪ್ರತಿರೋಧ ಒಡ್ಡಿದ ಕಾರಣ ಆಕೆ ಮೇಲೆ ಆಸಿಡ್ ಎರಚಿದ್ದಾರೆ.

ಶುಕ್ರವಾರದಂದು ಈ ಘಟನೆ ನಡೆದಿದ್ದು, ಮಹಿಳೆ, ಕಾನ್ಪುರ್- ಪ್ರಯಾಗ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅದೇ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕಾಮುಕರು ಆಕೆಯ ಮೇಲೆ ಅತ್ಯಾಚಾರವೆಸಗಲು ಯತ್ನಿಸಿದ್ದಾರೆ.

ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಂತೆಯೇ ಮಹಿಳೆಯ ಮೇಲೆ ಆಸಿಡ್ ಎರಚಿ ಅಲ್ಲಿಂದ ಪರಾರಿಯಾಗಿದ್ದಾರೆ. ತೀವ್ರ ಸುಟ್ಟಗಾಯಗಳಾಗಿದ್ದ ಮಹಿಳೆಯನ್ನು ಈಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೇ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...