alex Certify
ಕನ್ನಡ ದುನಿಯಾ       Mobile App
       

Kannada Duniya

ಹಸು ಕದ್ದ ಆರೋಪಿ ಸಾವಿಗೆ ಕಾರಣವಾಯ್ತು ಪೊಲೀಸ್ ನಿರ್ಲಕ್ಷ್ಯ…?

ಅಲವಾರ್ ನಲ್ಲಿ ಶುಕ್ರವಾರ ಹಸುಗಳ ಕಳ್ಳತನ ಆರೋಪದ ಮೇಲೆ ಅಕ್ಬರ್ ಎಂಬಾತನನ್ನು ಹೊಡೆದು ಕೊಲೆ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಆಘಾತಕಾರಿ ಸಂಗತಿಯೊಂದು ಬಹಿರಂಗವಾಗಿದೆ. ಮೃತ ಅಕ್ಬರ್ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದರೆ ಪೊಲೀಸರು ಅಕ್ಬರ್ ಗೆ ಮೊದಲು ಚಿಕಿತ್ಸೆ ಕೊಡಿಸುವ ಬದಲು ನಿರ್ಲಕ್ಷ್ಯ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಮೊದಲು ಎರಡು ಆಕಳನ್ನು ಗೋಶಾಲೆಗೆ ಕಳುಹಿಸಿದ್ದಾರೆ. ನಂತ್ರ ಅಕ್ಬರ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಎಲ್ಲ ಕೆಲಸಕ್ಕೆ ಪೊಲೀಸರು 3 ಗಂಟೆ ತೆಗೆದುಕೊಂಡಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತೆ ಅಕ್ಬರ್ ಮೃತಪಟ್ಟಿದ್ದಾನೆಂದು ವೈದ್ಯರು ತಿಳಿಸಿದ್ದರಂತೆ.

ಘಟನೆಗೆ ಸಂಬಂಧಿಸಿದಂತೆ ಭಾನುವಾರ ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಶನಿವಾರ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಘಟನೆ ತನಿಖೆ ಜವಾಬ್ದಾರಿಯನ್ನು ಎಸ್ಪಿ ಶ್ರೇಣಿಯ ಅಧಿಕಾರಿಗೆ ನೀಡಲಾಗಿದೆ. ಘಟನೆ ಬಗ್ಗೆ ಕಾಂಗ್ರೆಸ್ ಕೆಂಡ ಕಾರಿದೆ. ಮುಸ್ಲಿಮರಿಗೆ ಹೋಲಿಕೆ ಮಾಡಿದ್ರೆ ಹಸು ಹೆಚ್ಚು ಸುರಕ್ಷಿತ ಎಂದು ಶಶಿ ತರೂರ್ ಆರೋಪ ಮಾಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...