alex Certify
ಕನ್ನಡ ದುನಿಯಾ       Mobile App
       

Kannada Duniya

ಯುವತಿಯನ್ನು ವಿವಸ್ತ್ರಗೊಳಿಸಿದ ಬ್ಯಾಡ್ ಬಾಯ್ಸ್?

up boys nir

ಲಖ್ನೋ: ಅತ್ಯಾಚಾರ, ಲೈಂಗಿಕ ಕಿರುಕುಳ ಮೊದಲಾದ ಕಾರಣಕ್ಕೆ ಸದಾ ಸುದ್ದಿಯಲ್ಲಿರುವ ಉತ್ತರ ಪ್ರದೇಶದಲ್ಲಿ ನಂಬಲು ಕಷ್ಟ ಎನಿಸುವಂತಹ ಘಟನೆಯೊಂದು ನಡೆದಿದೆ. 6 ಮತ್ತು 4 ವರ್ಷದ ಬಾಲಕರು ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

6 ವರ್ಷದ ಸೋನು ಹಾಗೂ 4 ವರ್ಷದ ಮೋನು ಎಂಬ ಬಾಲಕರು ಯುವತಿಯೊಬ್ಬಳನ್ನು ಬೆತ್ತಲೆ ಮಾಡಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಉತ್ತರಪ್ರದೇಶದ ಗೋರಖ್ ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿರ್ಮಲಾ ದೇವಿ ಎಂಬಾಕೆ, ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ತಮ್ಮ ಪುತ್ರಿಗೆ ಇಬ್ಬರೂ ಬಾಲಕರು ಬಟ್ಟೆ ಬಿಚ್ಚಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಾಲಕರು ಹೆದರಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಬಾಲಕರ ಪೋಷಕರು, ತಮ್ಮ ಮಕ್ಕಳು ಆ ರೀತಿ ಮಾಡಿಲ್ಲ. ಇದು ಸುಳ್ಳು ಆರೋಪವಾಗಿದೆ ಎಂದು ದೂರಿದ್ದಾರೆ. ಕಳೆದ ತಿಂಗಳು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಲಕರು ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಸುದ್ದಿಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...