alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಕಿ ಮೇಲೆ ಅತ್ಯಾಚಾರವೆಸಗಿ ಸಜೀವ ದಹನ

ಅಸ್ಸಾಂನ ನಗೌನ್ ಜಿಲ್ಲೆಯಲ್ಲಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಸಹಪಾಠಿಗಳು, ಆಕೆಯನ್ನು ಬೆಂಕಿ ಹಚ್ಚಿ ಕೊಂದಿದ್ದಾರೆ. ಮೂವರಲ್ಲಿ ಇಬ್ಬರು ಆರೋಪಿಗಳು ಬಾಲಕಿಯ ಸಹಪಾಠಿಗಳು, ಇನ್ನೋರ್ವ ಆರೋಪಿ ಜಾಕಿರ್ ಹುಸೇನ್ ಅದೇ ಗ್ರಾಮದವನು.

ಬಾಲಕಿ ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಮೂವರು ಒಳನುಗ್ಗಿದ್ದಾರೆ. ಅವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಶೇ.90ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಬಾಲಕಿ ಗಂಭೀರ ಸ್ಥಿತಿಯಲ್ಲಿದ್ಲು.

ಕೂಡಲೇ ಅವಳನ್ನು ಆಸ್ಪತ್ರೆಗೆ ದಾಖಲು ಮಾಡಲಾಯ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಇಬ್ಬರು ಬಾಲಾರೋಪಿಗಳನ್ನು ಬಂಧಿಸಲಾಗಿದೆ. ಓರ್ವ ಪರಾರಿಯಾಗಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...