alex Certify
ಕನ್ನಡ ದುನಿಯಾ       Mobile App
       

Kannada Duniya

ಎಟಿಎಂ ದರೋಡೆಗೆ ವಿಫಲ ಯತ್ನ

kar atm

ಎಟಿಎಂ ಕಳವಿಗೆ ವಿಫಲ ಯತ್ನ ನಡೆಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ಎಟಿಎಂ ದೋಚಿದರೆ ಹಣ ಸಿಗುತ್ತದೆ ಎಂದುಕೊಂಡ ದುಷ್ಕರ್ಮಿಗಳು ಧಾರವಾಡದ ಪ್ರಮುಖ ಸರ್ಕಲ್ ನಲ್ಲಿರುವ ಕರ್ನಾಟಕ ಬ್ಯಾಂಕ್ ಎಟಿಎಂ ದೋಚಲು ಮುಂದಾಗಿದ್ದಾರೆ. ಯಂತ್ರಗಳನ್ನೆಲ್ಲಾ ಹಾಳುಗೆಡವಿದ್ದಾರೆ.

ತಡರಾತ್ರಿ ನಾಲ್ವರು ದುಷ್ಕರ್ಮಿಗಳ ತಂಡ ಕರ್ನಾಟಕ ಬ್ಯಾಂಕ್ ಎಟಿಎಂಗೆ ನುಗ್ಗಿದ್ದು, ಸ್ಥಳದಲ್ಲಿ ಕಾವಲುಗಾರ ಶಿವಕುಮಾರ್ ಮೇಲೆ ಹಲ್ಲೆ ಮಾಡಿದ್ದಾರೆ. ಅವರನ್ನು ಹಗ್ಗದಿಂದ ಕಟ್ಟಿಹಾಕಿ ಎಟಿಎಂ ಯಂತ್ರಗಳನ್ನು ಒಡೆದುಹಾಕಿದ್ದಾರೆ. ಎಟಿಎಂನಲ್ಲಿದ್ದ ಹಣ ದೋಚಲು ಸುಮಾರು 1 ಗಂಟೆಗೂ ಅಧಿಕ ಕಾಲ ಪ್ರಯತ್ನ ನಡೆಸಿದ್ದು, ಈ ವೇಳೆ ಕಾವಲುಗಾರ ಶಿವಕುಮಾರ್ ಕೂಗಿದಾಗ ಮತ್ತೆ ಹಲ್ಲೆ ಮಾಡಿದ್ದಾರೆ. ಕೆಲ ಸಮಯ ವಿಫಲ ಯತ್ನ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ.

ಎಟಿಎಂಗೆ ಹಣ ತೆಗೆಯಲು ಬಂದ ಗ್ರಾಹಕರು ಶಿವಕುಮಾರ್ ಅವರನ್ನು ಕಟ್ಟಿಹಾಕಿದ್ದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಲ್ಲೆಗೊಳಗಾದ ಶಿವಕುಮಾರ್ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಉಪನಗರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...