alex Certify
ಕನ್ನಡ ದುನಿಯಾ       Mobile App
       

Kannada Duniya

ತಾಯಿ ನಡತೆ ಅನುಮಾನಿಸಿ ಮಗನಿಂದ ಇಂಥ ಕೃತ್ಯ

bagalkote

ಬಾಗಲಕೋಟೆ: ತಾಯಿಯ ನಡತೆಯ ಬಗ್ಗೆ ಸಂಶಯಗೊಂಡ ಯುವಕನೊಬ್ಬ ಭೀಕರವಾಗಿ ಥಳಿಸಿ ಕೊಲೆ ಮಾಡಿದ ಘಟನೆ, ಬಾಗಲಕೋಟೆ ಜಿಲ್ಲೆಯ ಕೆರೂರ ಸಮೀಪದ ಜಮ್ಮನಕಟ್ಟಿ ಗ್ರಾಮದಲ್ಲಿ ನಡೆದಿದೆ.

48 ವರ್ಷದ ರುದ್ರವ್ವ ಕೊಲೆಯಾದ ಮಹಿಳೆ. ಆಕೆಯ ಪುತ್ರ ಮಹಾಂತೇಶ ಕೊಲೆ ಆರೋಪಿಯಾಗಿದ್ದಾನೆ. ತಾಯಿಯ ಅನೈತಿಕ ಸಂಬಂಧದ ವಿಚಾರವಾಗಿ ಜಗಳವಾಡಿದ್ದಾನೆ.

ಜಗಳ ವಿಕೋಪಕ್ಕೆ ತಿರುಗಿ ಕಬ್ಬಿಣದ ರಾಡಿನಿಂದ ತಾಯಿಯ ತಲೆಗೆ ಹೊಡೆದು ಕೊಲೆ ಮಾಡಿ ಪರಾರಿಯಾದ ಮಹಾಂತೇಶ, ಬಳಿಕ ತಾನೇ ಕೆರೂರ ಠಾಣೆ ಪೊಲೀಸರಿಗೆ ಶರಣಾಗಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...