alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಡಹಗಲೇ ನಡೆದ ಘಟನೆಯಿಂದ ಬೆಚ್ಚಿ ಬಿದ್ದ ಜನ

balaru

ಬಳ್ಳಾರಿ: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ, ಮಗಳ ಮೇಲೆ ಮಚ್ಚಿನಿಂದ ಥಳಿಸಿದ ಘಟನೆ ಬಳ್ಳಾರಿ ಸಮೀಪದ ಕೆ. ವೀರಾಪುರ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

ರೈಲಿಗಾಗಿ ಕಾಯುತ್ತಿದ್ದ ಚಂದ್ರಪ್ಪ ಮತ್ತು ಅವರ ಪುತ್ರಿ ಭುವನೇಶ್ವರಿ(27) ಅವರ ಮೇಲೆ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಥಳಿಸಿದ್ದಾರೆ.

ಇಬ್ಬರೂ ಅಲ್ಲಿಂದ ಓಡಲು ಯತ್ನಿಸಿದ್ದು, ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಹೋಗಿ ರೈಲ್ವೇ ಹಳಿಯ ಮೇಲೆಯೇ ಭುವನೇಶ್ವರಿಯನ್ನು ಕೊಚ್ಚಿ ಕೊಲೆ ಮಾಡಿದ್ದಾರೆ.

ಚಂದ್ರಪ್ಪ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.

ಹಾಡಹಗಲೇ ರೈಲ್ವೇ ನಿಲ್ದಾಣದಲ್ಲಿ ನಡೆದ ಘಟನೆಯಿಂದ ಜನ ಬೆಚ್ಚಿ ಬಿದ್ದಿದ್ದಾರೆ. ಸ್ಥಳಕ್ಕೆ ಬಳ್ಳಾರಿ ರೈಲ್ವೇ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರ ಹೊಸ ಪಕ್ಷ ಸ್ಥಾಪಿಸಿದರೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...