alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸ್ ವಾಹನದಲ್ಲೇ ದುಡುಕಿದ ಪ್ರೇಮಿಗಳು

ಬೆಳಗಾವಿ: ಪೊಲೀಸ್ ವಾಹನದಲ್ಲಿಯೇ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ಅಂಕಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

20 ವರ್ಷದ ಯುವಕ ಹಾಗೂ 16 ವರ್ಷದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದವರು. ಬಾಲಕಿ ಮನೆಯಿಂದ ಕಾಣೆಯಾಗಿದ್ದರಿಂದ ಪೋಷಕರು ಅಂಕಲಿ ಠಾಣೆಗೆ ದೂರು ನೀಡಿದ್ದಾರೆ.

ಯುವಕ ಹಾಗೂ ಬಾಲಕಿ ಮಹಾರಾಷ್ಟ್ರದಲ್ಲಿರುವುದನ್ನು ತಿಳಿದ ಪೊಲೀಸರು ಇಬ್ಬರನ್ನು ವಾಹನದಲ್ಲಿ ಕರೆ ತಂದಿದ್ದಾರೆ. ತಮ್ಮನ್ನು ಪೋಷಕರು ಹಾಗೂ ಪೊಲೀಸರು ದೂರ ಮಾಡುವ ಆತಂಕದಿಂದ ಇಬ್ಬರೂ ವಿಷ ಸೇವಿಸಿದ್ದಾರೆ. ಅಸ್ವಸ್ಥರಾಗಿರುವ ಅವರನ್ನು ಚಿಕ್ಕೋಡಿ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...