alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತು ಬರಿಸಿ ಯುವತಿ ಮೇಲೆ ಬಾಯ್ ಫ್ರೆಂಡ್ ಬಲಾತ್ಕಾರ

ಬೆಂಗಳೂರು: ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿ, ಅತ್ಯಾಚಾರ ಎಸಗಿದ ದುರುಳನೊಬ್ಬ ವಿಡಿಯೋ ಮಾಡಿಕೊಂಡಿದ್ದು, ಅದನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ.

ದಿನೇಶ್ ಎಂಬಾತನೇ ಇಂತಹ ಕೃತ್ಯವೆಸಗಿದವ. ಸಂತ್ರಸ್ಥೆಯ ಸ್ನೇಹಿತನೇ ಆಗಿರುವ ದಿನೇಶ್ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಕರೆದೊಯ್ದು ಅಲ್ಲಿ ಲಾಡ್ಜ್ ನಲ್ಲಿ ತಂಗಿದ್ದ ಸಂದರ್ಭದಲ್ಲಿ ಎಳನೀರಿನಲ್ಲಿ ಮತ್ತು ಬರುವ ಪದಾರ್ಥ ಬೆರೆಸಿಕೊಟ್ಟಿದ್ದಾನೆ.

ಯುವತಿ ಪ್ರಜ್ಞೆ ತಪ್ಪಿದಾಗ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ಯಾರಿಗೂ ವಿಷಯ ತಿಳಿಸಬೇಡ ನಾನೇ ಮದುವೆಯಾಗ್ತೇನೆ ಎಂದು ನಂಬಿಸಿದ್ದಾನೆ. ಕೆಲವು ದಿನಗಳ ನಂತರ ಬೇರೆ ಯುವತಿಯೊಂದಿಗೆ ಮದುವೆಗೆ ಸಿದ್ಧತೆ ನಡೆಸಿದ್ದಾನೆ. ಈ ವಿಷಯ ಗೊತ್ತಾಗಿ ಯುವತಿ ಪ್ರಶ್ನಿಸಿದಾಗ, ಮನೆಯಲ್ಲಿ ತಾಯಿ ಒಪ್ಪುವುದಿಲ್ಲ ಎಂದು ಸಬೂಬು ಹೇಳಿದ್ದಾನೆ.

ಕೆಲವು ದಿನಗಳ ಬಳಿಕ ಮಾತನಾಡಬೇಕಿದೆ ಎಂದು ಮಡಿಕೇರಿಗೆ ಕರೆದೊಯ್ದು ಅತ್ಯಾಚಾರ ಎಸಗಿ, ವಿಡಿಯೋ ಮಾಡಿಕೊಂಡಿದ್ದಾನೆ. ನಂತರದಲ್ಲಿ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ನೊಂದ ಯುವತಿ ಹೆಚ್.ಎ.ಎಲ್. ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...