alex Certify
ಕನ್ನಡ ದುನಿಯಾ       Mobile App
       

Kannada Duniya

ವಾರಕ್ಕೆ ಪತಿ ಬಿಟ್ಲು ಯುವತಿ, ಪ್ರಿಯಕರನಿಂದ ಘೋರಕೃತ್ಯ

ಬೆಂಗಳೂರು: ಕ್ಷುಲ್ಲಕ ವಿಷಯಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ, ಆಕ್ರೋಶಗೊಂಡ ಪ್ರಿಯಕರ ಪ್ರಿಯತಮೆಯನ್ನು ಕೊಲೆ ಮಾಡಿದ ಘಟನೆ ಜೆ.ಸಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇಬ್ಬರೂ ಮೊದಲಿನಿಂದಲೂ ಪ್ರೀತಿಸಿದ್ದರಾದರೂ, ಯುವತಿಗೆ ಬೇರೆ ವ್ಯಕ್ತಿಯೊಂದಿಗೆ ಮದುವೆಯಾಗಿದೆ. ಮದುವೆಯಾದ 1 ವಾರದಲ್ಲೇ ಪತಿಯನ್ನು ತೊರೆದು ಬಂದಿದ್ದ ಯುವತಿ ಜೆ.ಸಿ. ನಗರದಲ್ಲಿ ಯುವಕನೊಂದಿಗೆ ವಾಸವಾಗಿದ್ದರು.

ಸಣ್ಣ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ಪ್ರಿಯಕರ ಚಾಕುವಿನಿಂದ ಇರಿದಿದ್ದಾನೆ. ಯುವತಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...