alex Certify
ಕನ್ನಡ ದುನಿಯಾ       Mobile App
       

Kannada Duniya

ಕೈ,ಕಾಲು ಕಟ್ಟಿ ಇಸ್ಕಾನ್ ಅರ್ಚಕರ ಬರ್ಬರ ಹತ್ಯೆ

ಬೆಂಗಳೂರು: ಕೈ,ಕಾಲು ಕಟ್ಟಿ ಹಾಕಿ ಚಾಕುವಿನಿಂದ ಇರಿದು, ಇಸ್ಕಾನ್ ದೇವಾಲಯದ ಅರ್ಚಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸಂಜಯ್ ಸತೀಶ್ ಕೊಲೆಯಾದ ವ್ಯಕ್ತಿ. ಕೆ.ಆರ್. ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ ಮೆಂಟ್ ನಲ್ಲಿ ಅವರು ವಾಸವಾಗಿದ್ದರು. ರಾತ್ರಿ ಅವರ ನಿವಾಸದಿಂದ ದುರ್ವಾಸನೆ ಬರುತ್ತಿದ್ದ ಕಾರಣ, ಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಕೊಳೆತ ಸ್ಥಿತಿಯಲ್ಲಿದ್ದ ಸಂಜಯ್ ಸತೀಶ್ ಮೃತದೇಹ ಕಂಡು ಬಂದಿದೆ. ಬೆರಳಚ್ಚು ತಜ್ಞರು ಕೂಡ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಕಳೆದ ಬುಧವಾರ ಅವರು ದೇವಾಲಯದಲ್ಲಿ ಪೂಜೆ ಮುಗಿಸಿ ಅಪಾರ್ಟ್ ಮೆಂಟ್ ಗೆ ವಾಪಸ್ ಆಗಿದ್ದರು. ಈ ವೇಳೆ ದುಷ್ಕರ್ಮಿಗಳು ಅವರನ್ನು ಕೊಲೆ ಮಾಡಿದ್ದಾರೆ. ಅವರು ಒಬ್ಬರೇ ವಾಸವಾಗಿದ್ದ ಕಾರಣ, ವಿಷಯ ಬೆಳಕಿಗೆ ಬಂದಿಲ್ಲ. ಕೆ.ಆರ್. ಪುರಂ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...