alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತಿನಲ್ಲಿ ಮಗನಿಂದಲೇ ಹೇಯ ಕೃತ್ಯ

ಬೆಂಗಳೂರು: ಬೆಂಗಳೂರಿನ ಟಿ. ದಾಸರಹಳ್ಳಿಯ ಮಲ್ಲಸಂದ್ರದಲ್ಲಿ ವ್ಯಕ್ತಿಯೊಬ್ಬ ತಾಯಿಯನ್ನೇ ಮರದ ರಿಪೀಸ್ ನಿಂದ ಥಳಿಸಿ, ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಮುನಿಯಮ್ಮ(55) ಕೊಲೆಯಾದ ಮಹಿಳೆ. ಅವರ ಪುತ್ರನಾಗಿರುವ ಸಂತೋಷ್ ಮತ್ತಿನಲ್ಲಿ ತಾಯಿಯೊಂದಿಗೆ ಜಗಳವಾಡಿ ಇಂತಹ ಕೃತ್ಯವೆಸಗಿದ್ದಾನೆ. ಸೋಮವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮದ್ಯ ವ್ಯಸನಿಯಾಗಿದ್ದ ಸಂತೋಷ್ ಕುಡಿಯಲು ಹಣ ಕೊಡುವಂತೆ ತಾಯಿಯನ್ನು ಪೀಡಿಸುತ್ತಿದ್ದ ಸೋಮವಾರ ರಾತ್ರಿಯೂ ಹಣ ಕೊಡುವಂತೆ ಜಗಳವಾಡಿದ್ದು, ಜಗಳ ವಿಕೋಪಕ್ಕೆ ತಿರುಗಿ ತಾಯಿಯ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ. ಬಾಗಲಗುಂಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...