alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳಾ ಟೆಕ್ಕಿಯೊಂದಿಗೆ ಸೆಕ್ಸ್, ವಿಡಿಯೋ ಮಾಡಿ ಬ್ಲಾಕ್ಮೇಲ್

ಬೆಂಗಳೂರು: ತನಗಿಂತ ಹಿರಿಯ ವಯಸ್ಸಿನ ಮಹಿಳಾ ಟೆಕ್ಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಯುವಕನ ವಿರುದ್ಧ ದೂರು ದಾಖಲಾಗಿದೆ.

ಮ್ಯಾಟ್ರಿಮೋನಿಯಲ್ಲಿ ಪರಿಚಿತನಾಗಿದ್ದ 25 ವರ್ಷದ ಯುವಕ, 32 ವರ್ಷದ ಮಹಿಳೆಗೆ ಮೋಸ ಮಾಡಿದ್ದಾನೆ. ಆಂಧ್ರ ಮೂಲದ ನಾಗಾರ್ಜುನ ವಂಚಿಸಿದ ಆರೋಪಿ. ಬೆಂಗಳೂರಿನ ಮಾರತ್ ಹಳ್ಳಿ ಠಾಣೆಗೆ ಮಹಿಳೆ ದೂರು ನೀಡಿದ್ದಾರೆ.

ಬೆಂಗಳೂರಿನ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ರಿದ್ದ ಆಂಧ್ರ ಮೂಲದ ಮಹಿಳೆಯನ್ನು ಮ್ಯಾಟ್ರಿಮೋನಿಯ ಮೂಲಕ ಪರಿಚಯಿಸಿಕೊಂಡಿದ್ದ ನಾಗಾರ್ಜುನ, ಹೋಟೆಲ್ ಒಂದಕ್ಕೆ ಕರೆಸಿಕೊಂಡು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ.

ಮದುವೆಯಾಗುವುದಾಗಿ ನಂಬಿಸಿ ಇದೇ ರೀತಿ ಹಲವು ಸಲ ಲೈಂಗಿಕ ಕ್ರಿಯೆ ನಡೆಸಿದ್ದ. ಜೊತೆಯಾಗಿ ಓಡಾಡಿಕೊಂಡಿದ್ದ ಆತ ಈಗ ಕೈಕೊಟ್ಟಿದ್ದಾನೆ. ವಿಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡಿದ್ದಾನೆ.

ನೊಂದ ಟೆಕ್ಕಿ ಜನವರಿ 16 ರಂದು ಮಾರತ್ ಹಳ್ಳಿ ಠಾಣೆಗೆ ದೂರು ನೀಡಿದ್ದು, ಫೆಬ್ರವರಿ 5 ರಂದು ನಾಗಾರ್ಜುನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯಲ್ಲಿ ಆರೋಪಿ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...