alex Certify ಲಾಕ್ಡೌನ್ ವೇಳೆ ಮನೆಗೆ ಬಂದ ಗೆಳತಿ ಮೇಲೆ ಪ್ರೀತಿ ಹೆಸರಲ್ಲಿ ರೇಪ್, ಟೆಕ್ಕಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ಡೌನ್ ವೇಳೆ ಮನೆಗೆ ಬಂದ ಗೆಳತಿ ಮೇಲೆ ಪ್ರೀತಿ ಹೆಸರಲ್ಲಿ ರೇಪ್, ಟೆಕ್ಕಿ ಅರೆಸ್ಟ್

ಬೆಂಗಳೂರು: ಪ್ರೀತಿಸುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸಾಫ್ಟ್ ವೇರ್ ಉದ್ಯೋಗಿಯನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕುರುಬರಹಳ್ಳಿ ನಿವಾಸಿಯಾಗಿರುವ ಆಶಿಶ್ ಕುಮಾರ್ ಝಾ ಬಂಧಿತ ಆರೋಪಿ. ಬಿಹಾರ ಮೂಲದ ಆಶಿಶ್ ಕುಮಾರ್ ಬೆಂಗಳೂರಿನ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದು ಡೇಟಿಂಗ್ ಆಪ್ ಮೂಲಕ ಯುವತಿಯನ್ನು ಪರಿಚಯಿಸಿಕೊಂಡಿದ್ದಾನೆ. ಬಳಿಕ ಇಬ್ಬರ ನಡುವೆ ಗೆಳೆತನವಾಗಿದ್ದು ಲಾಕ್ಡೌನ್ ಸಂದರ್ಭದಲ್ಲಿ ಗೆಳತಿಯನ್ನು ಮನೆಗೆ ಕರೆಸಿಕೊಂಡ ಆರೋಪಿ ಪ್ರೀತಿಸುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...