alex Certify
ಕನ್ನಡ ದುನಿಯಾ       Mobile App
       

Kannada Duniya

ಸಹಪಾಠಿಯೊಂದಿಗಿನ ಸಲುಗೆಯಿಂದ ಆಸ್ಪತ್ರೆಗೆ

crime-ben-cc

ಬೆಂಗಳೂರು: ಕಾಲೇಜಿನಲ್ಲಿ ಸಹಪಾಠಿಯಾಗಿದ್ದ ವಿದ್ಯಾರ್ಥಿನಿಯೊಂದಿಗೆ ಸಲುಗೆಯಿಂದ ಮಾತನಾಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಆಸ್ಪತ್ರೆ ಸೇರುವಂತಾಗಿದೆ.

ಕೇರಳ ಮೂಲದ ಆಶಿಕ್(23) ಇರಿತಕ್ಕೆ ಒಳಗಾಗಿ ಆಸ್ಪತ್ರೆ ಸೇರಿದವ. ವಿದ್ಯಾರ್ಥಿನಿಯನ್ನು ಪ್ರೀತಿಸಿದ್ದ ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಚಾಕುವಿನಿಂದ ಇರಿದಿದ್ದಾನೆ.

ಬಿಹಾರ ಮೂಲದ ಅಮರನಾಥ ಯಾದವ್ ಮತ್ತು ಆತನ ಸ್ನೇಹಿತರು ಆರ್.ಪಿ.ಸಿ. ಲೇಔಟ್ ನ ಪೈಪ್ ಲೈನ್ ರಸ್ತೆಯಲ್ಲಿ ಆಶಿಕ್ ಮೇಲೆ ಹಲ್ಲೆ ನಡೆಸಿ, ಕುತ್ತಿಗೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.

ಗಾಯಗೊಂಡಿರುವ ಆಶಿಕ್ ನನ್ನು ವಿಜಯನಗರದ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಸಂಬಂಧ ಕೇಸ್ ದಾಖಲಿಸಿಕೊಂಡಿರುವ ವಿಜಯನಗರ ಠಾಣೆ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಕಾಲೇಜಿನಲ್ಲಿ ಸಹಪಾಠಿಯೊಂದಿಗೆ ಸಲುಗೆಯಿಂದ ಮಾತನಾಡಿದ್ದಕ್ಕೆ ಆಶಿಕ್ ಆಕೆಯ ಪ್ರಿಯಕರ ಅಮರನಾಥ ಯಾದವ್ ನಿಂದ ಹಲ್ಲೆಗೆ ಒಳಗಾಗಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...