alex Certify
ಕನ್ನಡ ದುನಿಯಾ       Mobile App
       

Kannada Duniya

ಕುಡಿದು ಟೈಟ್ ಆದವನಿಂದ ಹೋಟೆಲ್ ನಲ್ಲಿ ದಾಂಧಲೆ

ಕಂಠಪೂರ್ತಿ ಮದ್ಯ ಸೇವಿಸಿದವನೊಬ್ಬ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆ ಮೈಸೂರಿನ ಇಲವಾಲದಲ್ಲಿ ನಡೆದಿದೆ.

ಸಂತೋಷ್ ಎಂಬ ಯುವಕ ಇಲವಾಲದ ಹೋಟೆಲಿಗೆ ಬಂದಿದ್ದು, ಏಕಾಏಕಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಲು ಆರಂಭಿಸಿದ್ದಾನೆ. ಅಷ್ಟೇ ಅಲ್ಲ, ಗಾಜು, ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾನೆ.

ಈ ಹಿಂದೆ ಹೋಟೆಲಿಗೆ ಬಂದಿದ್ದ ಸಂತೋಷ್, ಬಿಲ್ ಬಾಕಿ ಇರಿಸಿಕೊಂಡಿದ್ದನೆಂದು ಹೇಳಲಾಗಿದ್ದು, ಅದನ್ನು ಸಿಬ್ಬಂದಿ ಕೇಳಿದರೆಂಬ ಕಾರಣಕ್ಕೆ ಅದನ್ನೇ ಮನಸ್ಸಿನಲ್ಲಿ ಇಟ್ಟುಕೊಂಡಿದ್ದ ಆತ ಉದ್ದೇಶಪೂರ್ವಕವಾಗಿ ಈ ಕೃತ್ಯವೆಸಗಿದ್ದಾನೆನ್ನಲಾಗಿದೆ.

ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಸಂತೋಷ್ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನ ಬಂಧನಕ್ಕೆ ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...