alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ನಿ ಜೊತೆ ಜಗಳವಾಡಿ ಬೈಕ್ ಗೆ ಬೆಂಕಿ ಹಚ್ಚಿದ ಪತಿ

ದೆಹಲಿಯ ಬಿಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗುರು ಹರಿಕಿಶನ್ ನಗರದಲ್ಲಿ ಪತ್ನಿ ಮೇಲಿನ ಕೋಪಕ್ಕೆ ಪತಿಯೊಬ್ಬ ಬೈಕ್ ಗಳಿಗೆ ಬೆಂಕಿ ಹಚ್ಚಿದ್ದಾನೆ. ಪತ್ನಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚಿದ್ದು, 4 ನಾಲ್ಕು ಬೈಕ್ ಭಸ್ಮವಾಗಿದೆ. ಪತಿ ಮುಖ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಯನ್ನು ವಿಚಾರಣೆ ಮಾಡಿ ಬಿಡುಗಡೆ ಮಾಡಲಾಗಿದೆ.

ಆರೋಪಿ ಕೋಮಲ್ ಭಾಟಿಯಾ ಪತ್ನಿ ಪೂಜಾಗೆ ಚಿತ್ರಹಿಂಸೆ ನೀಡುತ್ತಿದ್ದನಂತೆ. ಇದ್ರಿಂದ ಬೇಸತ್ತ ಪೂಜಾ ತವರಿಗೆ ಬಂದಿದ್ದಳು. ಇದ್ರಿಂದ ಕೋಪಗೊಂಡಿದ್ದ ಪತಿ ಸೋಮವಾರ ರಾತ್ರಿ ಪತ್ನಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ 4 ಬೈಕ್ ಸುಟ್ಟಿವೆ. ಸ್ಥಳೀಯರು ಅಗ್ನಿಶಾಮಕ ದಳ ಬರುವ ಮೊದಲೇ ನೀರು ಹಾಕಿ ಬೆಂಕಿ ನಂದಿಸಿದ್ದಾರೆ.

ಸಿಸಿ ಟಿವಿಯಲ್ಲಿ ಕೋಮಲ್ ಸೆರೆಯಾಗಿದ್ದು, ಆತನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆರೋಪಿಯನ್ನು ಬಿಡುಗಡೆ ಮಾಡಿರುವುದು ಪೂಜಾ ಕುಟುಂಬಸ್ಥರ ಕೋಪಕ್ಕೆ ಕಾರಣವಾಗಿದೆ. ಪತಿ-ಪತ್ನಿ ಜಗಳ ಅಕ್ಕಪಕ್ಕದವರನ್ನು ಆತಂಕಕ್ಕೀಡುಮಾಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...