alex Certify
ಕನ್ನಡ ದುನಿಯಾ       Mobile App
       

Kannada Duniya

ರೇಪ್ ದೃಶ್ಯ ಸೆರೆ ಹಿಡಿದು ಬ್ಲಾಕ್ ಮೇಲ್

rape-d-up-benki

ಮುಜಾಫರ್ ನಗರ: ಅತ್ಯಾಚಾರಕ್ಕೊಳಗಾಗಿದ್ದ ದೃಶ್ಯಗಳನ್ನು ಸೆರೆ ಹಿಡಿದು ಬ್ಲಾಕ್ ಮೇಲ್ ಮಾಡಿದ್ದರಿಂದ ಮನನೊಂದ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ 16 ವರ್ಷದ ಬಾಲಕಿ ಮೇಲೆ, ಇಬ್ಬರು ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ.

ನೀಚ ಕೃತ್ಯದ ದೃಶ್ಯಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು, ಆಕೆಗೆ ಬ್ಲಾಕ್ ಮೇಲೆ ಮಾಡಿ, ಪದೇ ಪದೇ ಕಿರುಕುಳ ನೀಡಿದ್ದಾರೆ.

ಇದರಿಂದ ಮನನೊಂದ ಅಪ್ರಾಪ್ತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮೃತಪಟ್ಟಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಇಬ್ಬರು ದುಷ್ಕರ್ಮಿಗಳಲ್ಲಿ ಓರ್ವನನ್ನು ಬಂಧಿಸಿದ್ದಾರೆ.

ಮತ್ತೊಬ್ಬ ತಲೆ ಮರೆಸಿಕೊಂಡಿದ್ದು, ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಫೀಸರ್ ಅಶೋಕ್ ಕುಮಾರ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...