alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಲದಿಂದ ತಪ್ಪಿಸಿಕೊಳ್ಳಲು ಪತ್ನಿಗೆ ಗುಂಡಿಟ್ಟ ಪತಿ

ರಾಜಧಾನಿ ದೆಹಲಿಯಲ್ಲಿ ಕಾರ್ ನಲ್ಲಿ ನಡೆದ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾರ್ ನಲ್ಲಿ ಮಹಿಳೆ ಹತ್ಯೆ ಮಾಡಿದ್ದು ಆಕೆ ಪತಿ ಎಂಬುದು ಸ್ಪಷ್ಟವಾಗಿದೆ. ವ್ಯಾಪಾರಿ ಪತಿ ಪಂಕಜ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆಂದು ಪೊಲೀಸರು ಹೇಳಿದ್ದಾರೆ.

ಬುಧವಾರ ದೆಹಲಿಯ ಬಾದಲಿ ರಸ್ತೆಯಲ್ಲಿ ಮಾರುತಿ ರಿಟ್ಜ್ ಕಾರಿನಲ್ಲಿ ಪ್ರಯಾಣ ಬೆಳೆಸುತ್ತಿದ್ದ ಕುಟುಂಬವೊಂದರ ಮೇಲೆ ಗುಂಡಿನ ದಾಳಿ ನಡೆದಿತ್ತು. ಈ ವೇಳೆ ಕಾರಿನಲ್ಲಿದ್ದ ಮಹಿಳೆ, ಗಂಡ ಹಾಗೂ ಮಗಳ ಮುಂದೆಯೇ ಸಾವನ್ನಪ್ಪಿದ್ದಳು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ಶುರುಮಾಡಿದ್ದರು.

ವಿಚಾರಣೆ ವೇಳೆ ಪಂಕಜ್ ಹೇಳಿಕೆ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಸಾಲ ನೀಡಿದ್ದ ವ್ಯಕ್ತಿಗಳು ನನ್ನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆಂದು ಪಂಕಜ್ ಕಥೆ ಕಟ್ಟಿದ್ದ. ಆದ್ರೆ ಪಂಕಜ್ ಗೆ ಯಾವುದೇ ಗುಂಡು ತಗುಲಿರಲಿಲ್ಲ. ಈ ಬಗ್ಗೆ ವಿಚಾರಣೆ ನಡೆಸಿದ ಪೊಲೀಸರು ಸಿಸಿ ಟಿವಿ ದೃಶ್ಯಗಳನ್ನು ವೀಕ್ಷಿಸಿದ್ದಾರೆ. ವಿಚಾರಣೆ ವೇಳೆ ಪಂಕಜ್ ಸತ್ಯ ಒಪ್ಪಿಕೊಂಡಿದ್ದಾನೆ. ಸಾಲಗಾರರಿಂದ ತಪ್ಪಿಸಿಕೊಳ್ಳಲು ತಾನೇ ಪತ್ನಿಯನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಪಂಕಜ್ ವ್ಯಾಪಾರಕ್ಕಾಗಿ 4 ಲಕ್ಷ ಪಡೆದಿದ್ದ. ಬಡ್ಡಿ ಸೇರಿ ಅದು 40 ಲಕ್ಷಕ್ಕೆ ಬಂದು ನಿಂತಿದೆ. ಇಷ್ಟು ಹಣವನ್ನು ತೀರಿಸಲಾಗದ ಪಂಕಜ್ ಪತ್ನಿಯನ್ನು ಹತ್ಯೆಗೈದಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...