alex Certify
ಕನ್ನಡ ದುನಿಯಾ       Mobile App
       

Kannada Duniya

ದೆಹಲಿ ಹೋಟೆಲ್ ನಲ್ಲಿ ಮಹಿಳಾ ಉದ್ಯಮಿ ಮೇಲೆ ರೇಪ್

rape in delhiವ್ಯವಹಾರ ಸಂಬಂಧ ಮಾತುಕತೆ ನಡೆಸಲು ಮಹಿಳಾ ಉದ್ಯಮಿಯನ್ನು ಹೋಟೆಲ್ ಗೆ ಕರೆಸಿಕೊಂಡಿದ್ದ ವ್ಯಕ್ತಿಯೊಬ್ಬ ಆಕೆಗೆ ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರವೆಸಗಿರುವ ಘಟನೆ ದೆಹಲಿಯ ಕನ್ಹಾಟ್ ಪ್ಲೇಸ್ ನಲ್ಲಿ ನಡೆದಿದೆ.

ದಕ್ಷಿಣ ದೆಹಲಿಯ ಡಿಫೆನ್ಸ್ ಕಾಲೋನಿ ನಿವಾಸಿಯಾಗಿದ್ದ 33 ವರ್ಷದ ಮಹಿಳೆ ಉದ್ಯಮವೊಂದನ್ನು ನಡೆಸುತ್ತಿದ್ದು, ಚಂಡೀಘಡ ಮೂಲದ ವ್ಯಕ್ತಿಯೊಬ್ಬ ವ್ಯವಹಾರದ ಮಾತುಕತೆಗೆಂದು ಶುಕ್ರವಾರದಂದು ಕನ್ಹಾಟ್ ಪ್ಲೇಸ್ ನಲ್ಲಿರುವ ಹೋಟೆಲ್ ಗೆ ಆಹ್ವಾನಿಸಿದ್ದನೆಂದು ಹೇಳಲಾಗಿದೆ.

ಈತ ತಂಪು ಪಾನೀಯ ತರಿಸಿದ್ದು, ಅದಕ್ಕೆ ಮತ್ತು ಬರುವ ಮಾತ್ರೆ ಬೆರೆಸಿ ಬಳಿಕ ಅತ್ಯಾಚಾರವೆಸಗಿದ್ದಾನೆಂದು ಆರೋಪಿಸಲಾಗಿದೆ. ಪ್ರಜ್ಞೆ ಬಂದ ಬಳಿಕ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಅಷ್ಟರಲ್ಲಾಗಲೇ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...