alex Certify
ಕನ್ನಡ ದುನಿಯಾ       Mobile App
       

Kannada Duniya

ಸಾವಿಗೂ ಮುನ್ನ ಸೆಲ್ಫಿ….

hanging-334ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಕ್ಯಾಬ್ ಚಾಲಕನೊಬ್ಬ ನೇಣು ಹಾಕಿಕೊಳ್ಳುವ ಮುನ್ನ ಸೆಲ್ಫಿ ತೆಗೆದುಕೊಂಡು, ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ.

ಮೂಲತಃ ನಲ್ಗೊಂಡಾ ಜಿಲ್ಲೆಯವನಾದ 28 ವರ್ಷದ ಕೃಷ್ಣಕುಮಾರ್ ಆತ್ಮಹತ್ಯೆ ಮಾಡಿಕೊಂಡವನಾಗಿದ್ದು, ಪತ್ನಿ ಹಾಗೂ ಮಕ್ಕಳು ಊರಿಗೆ ಹೋಗಿದ್ದ ಸಂದರ್ಭದಲ್ಲಿ ತಾನು ವಾಸವಾಗಿದ್ದ ಬಾಡಿಗೆ ಮನೆಯಲ್ಲಿಯೇ ಈ ಕೃತ್ಯವೆಸಗಿಕೊಂಡಿದ್ದಾನೆ.

ಖಾಸಗಿ ಕ್ಯಾಬ್ ಚಾಲಕನಾಗಿದ್ದ ಕುಮಾರ್ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದು, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಕುರಿತು ಡೆತ್ ನೋಟ್ ಬರೆದಿಟ್ಟಿದ್ದಾನೆ. ಕುತ್ತಿಗೆಗೆ ಟವೆಲ್ ಬಿಗಿದುಕೊಂಡ ಬಳಿಕ ಕುಟುಂಬದವರಿಗೆ ವಿದಾಯ ಹೇಳುವಂತೆ ಟಾಟಾ ಮಾಡಿ ಬಳಿಕ ಫ್ಯಾನ್ ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಾಲ್ ಠಾಣೆ ಪೊಲೀಸರು ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...