alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ನಿಯ ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ

ಚಿಕ್ಕಬಳ್ಳಾಪುರ: ಪತ್ನಿಯ ನಡತೆ ಬಗ್ಗೆ ಅನುಮಾನಗೊಂಡ ವ್ಯಕ್ತಿಯೊಬ್ಬ, ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಚಿಕ್ಕದಾಸೇಹಳ್ಳಿಯಲ್ಲಿ ನಡೆದಿದೆ.

28 ವರ್ಷದ ಮಹಿಳೆ ಕೊಲೆಯಾದವರು. ಪತ್ನಿಯನ್ನು ಹತ್ಯೆ ಮಾಡಿದ ಪತಿ, ಆಕೆಯ ಕಿವಿಗಳನ್ನು ಕತ್ತರಿಸಿ ಜೇಬಿನಲ್ಲಿಟ್ಟುಕೊಂಡಿದ್ದು, ಬೆಂಕಿ ಹಚ್ಚಿ ಮೃತದೇಹ ಸುಟ್ಟು ಹಾಕಿದ್ದಾನೆ.

ಚಿಕ್ಕದಾಸೇಹಳ್ಳಿಯಲ್ಲಿ ದಂಪತಿ ವಾಸವಾಗಿದ್ದು, ಇತ್ತೀಚೆಗೆ ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ಹತ್ಯೆ ಮಾಡಲು ಮುಂದಾಗಿದ್ದಾನೆ. ಬೆಳಿಗ್ಗೆ ಜಮೀನಿಗೆ ಕರೆದುಕೊಂಡು ಹೋಗಿ ಹತ್ಯೆ ಮಾಡಿದ್ದು, ಕಿವಿಯನ್ನು ಕತ್ತರಿಸಿದ್ದಾನೆ. ಜಮೀನಿನಲ್ಲೇ ಮೃತದೇಹ ಸುಟ್ಟು ಸೀದಾ ಶಿಡ್ಲಘಟ್ಟ ಗ್ರಾಮಾಂತರ ಠಾಣೆಗೆ ತೆರಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆತನನ್ನು ವಶಕ್ಕೆ ಪಡೆದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...