alex Certify
ಕನ್ನಡ ದುನಿಯಾ       Mobile App
       

Kannada Duniya

8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಖಾಸಗಿ ಅಂಗಕ್ಕೆ ರಾಡ್ ಹಾಕಿದ ಪಾಪಿ

ಮಧ್ಯ ಪ್ರದೇಶದ ಮಂದಸೌರ್ ನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ವಿಚಾರಣೆ ವೇಳೆ ಆಘಾತಕಾರಿ ವಿಷ್ಯಗಳು ಬಹಿರಂಗವಾಗಿದೆ. ವರದಿ ನಿರ್ಭಯ ಅತ್ಯಾಚಾರ ಪ್ರಕರಣವನ್ನು ನೆನಪು ಮಾಡುತ್ತಿದೆ. ಪಾಪಿ, 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ ಆಕೆ ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್ ಹಾಕಿದ್ದಾನೆ.

ಖಾಸಗಿ ಅಂಗಕ್ಕೆ ರಾಡ್ ಹಾಕಿದ್ದರಿಂದ ಬಾಲಕಿ ಪರಿಸ್ಥಿತಿ ಗಂಭೀರವಾಗಿತ್ತು. ಸತತ ಮೂರು ಗಂಟೆಗಳ ಶಸ್ತ್ರಚಿಕಿತ್ಸೆ ನಂತ್ರ ವೈದ್ಯರು ಬಾಲಕಿ ಜೀವ ಉಳಿಸಿದ್ದಾರೆ. ಆರೋಪಿ ಇರ್ಫಾನ್ ಮಂಗಳವಾರ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ. ಬುಧವಾರ ಬೆಳಿಗ್ಗೆ ಬಾಲಕಿ ನಾಪತ್ತೆ ಬಗ್ಗೆ ದೂರು ದಾಖಲಾಗಿತ್ತು. ವಿಚಾರಣೆ ಕೈಗೆತ್ತಿಕೊಂಡ ಪೊಲೀಸರಿಗೆ ಸ್ಕೂಲ್ ಬಳಿಯ ಬಸ್ ನಿಲ್ದಾಣದ ಹಿಂಭಾಗದಲ್ಲಿ ಬಾಲಕಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಾಣಿಸಿತ್ತು.

ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಬಾಲಕಿ ಆರೋಗ್ಯದಲ್ಲಿ ಸುಧಾರಣೆ ಕಾಣ್ತಿದೆ. ಆದ್ರೆ ಬಾಲಕಿ ಭಯಕ್ಕೆ ಮಾತನಾಡ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ. 20 ವರ್ಷದ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಅತ್ಯಾಚಾರದ ನಂತ್ರ ಬಾಲಕಿ ಹತ್ಯೆಗೆ ಯತ್ನಿಸಿದ್ದೇನೆ ಎಂದಿದ್ದಾನೆ. ಶಾಲೆ ಬಳಿ ಸಿಸಿ ಟಿವಿ ಇರಲಿಲ್ಲ. ಹಾಗಾಗಿ ತನಿಖೆಗೆ ಸ್ಪಲ್ಪ ಅಡ್ಡಿಯಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...