alex Certify
ಕನ್ನಡ ದುನಿಯಾ       Mobile App
       

Kannada Duniya

ಭ್ರಷ್ಟಾಚಾರ ಆರೋಪದಲ್ಲಿ ಸಿಕ್ಕಿಬಿದ್ದ ಜಿಲ್ಲಾ ನ್ಯಾಯಾಧೀಶ

ಬೇಲಿಯೇ ಎದ್ದು ಹೊಲ ಮೇಯ್ದ ಘಟನೆ ಇದು. ಭ್ರಷ್ಟಾಚಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಿದ್ದ ನ್ಯಾಯಾಧೀಶನೇ ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದಾನೆ.

ತೆಲಂಗಾಣದ ಭ್ರಷ್ಟಾಚಾರ ವಿರೋಧಿ ಬ್ಯೂರೋದಲ್ಲಿ ನ್ಯಾಯಾಧೀಶರ ವಿರುದ್ಧ ದೂರು ದಾಖಲಾಗಿತ್ತು. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದ ದೂರಿನ ಮೇಲೆ ನ್ಯಾಯಾಧೀಶರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದ 14 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ವಾರಾ ಪ್ರಸಾದ್ ರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು ಪ್ರಸಾದ್ ರನ್ನು ನವೆಂಬರ್ 28ರವರೆಗೆ ನ್ಯಾಯಾಂಗದ ಬಂಧನಕ್ಕೆ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ವಿರೋಧಿ ಬ್ಯೂರೋ ತನಿಖೆ ಮುಂದುವರೆಸಲಿದೆ. ಸದ್ಯ ನ್ಯಾಯಾಧೀಶರನ್ನು ಚಂಚಲಗೂಡ ಜೈಲಿಗೆ ಕಳುಹಿಸಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...