alex Certify
ಕನ್ನಡ ದುನಿಯಾ       Mobile App
       

Kannada Duniya

ತಡರಾತ್ರಿ ಪ್ರೇಮಿ ಕರೆಸಿಕೊಂಡ ಪ್ರಿಯತಮೆ, ನಂತರ ಆಗಿದ್ದೇನು?

crime mn 22 kl

ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಬ್ಬಾಳದ ಚೋಳನಾಯಕನಹಳ್ಳಿಯ ಕುಮಾರ್ ಹಲ್ಲೆಗೆ ಒಳಗಾದ ಯುವಕ. ಗಂಭೀರವಾಗಿ ಗಾಯಗೊಂಡಿರುವ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಕುಮಾರ್ ಬೆಂಗಳೂರಿನ ಆರ್.ಬಿ.ಐ. ಕಾಲೋನಿಯಲ್ಲಿ ವಾಸವಾಗಿರುವ ಯುವತಿಯನ್ನು ಕಳೆದ 4 ವರ್ಷಗಳಿಂದ ಪ್ರೀತಿಸುತ್ತಿದ್ದ. ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು. ಆದರೆ, ಯುವತಿಯ ಪೋಷಕರಿಗೆ ಇದು ಇಷ್ಟವಿರಲಿಲ್ಲ ಎನ್ನಲಾಗಿದೆ. ತಡರಾತ್ರಿ ಯುವತಿಯ ಫೋನ್ ನಿಂದಲೇ ಕರೆ ಮಾಡಿಸಿ ಈಗಲೇ ಬಾ, ನಿನ್ನ ಬಳಿ ಮಾತನಾಡುವುದಿದೆ ಎಂದು ಹೇಳಿದ್ದಾರೆ. ಆದರೆ, ಕುಮಾರ್ ಬೆಳಿಗ್ಗೆ ಬರುತ್ತೇನೆ ಎಂದರೂ, ಪ್ರಿಯತಮೆ ಒಪ್ಪದೇ ಈಗಲೇ ಬಾ ಎಂದಿದ್ದಾಳೆ.

ಕುಮಾರ್ ಯುವತಿಯ ಮನೆ ಸಮೀಪ ಬಂದ ಸಂದರ್ಭದಲ್ಲಿ ಆತನ ಕೈ ಕಾಲು ಕಟ್ಟಿ ಹಾಕಿ ಬಾಯಿಗೆ ಬಟ್ಟೆ ತುರುಕಿ ಮನಬಂದಂತೆ ಥಳಿಸಿದ್ದಾರೆ. ಯುವತಿ ಹಲ್ಲೆ ಮಾಡದಂತೆ ಪೋಷಕರಿಗೆ ಮನವಿ ಮಾಡಿದರೂ ಕೇಳದೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕುಮಾರ್, ಹೆಬ್ಬಾಳ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಕೇಸು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...