alex Certify
ಕನ್ನಡ ದುನಿಯಾ       Mobile App
       

Kannada Duniya

ಹಸುವಿನ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ಅರೆಸ್ಟ್

ಭೋಪಾಲ್‌: ಹಸುವಿನ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯ ಪ್ರದೇಶದ ರಾಜಘರ್‌ ಜಿಲ್ಲೆಯಲ್ಲಿ ನಡೆದಿದ್ದು, ಈ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇತ್ತೀಚೆಗೆ ಮೇಕೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಕುರಿತು ದೂರು ದಾಖಲಾಗಿತ್ತು. ಅದೇ ಮಾದರಿಯಲ್ಲಿ ಮಧ್ಯಪ್ರದೇಶದಲ್ಲಿ ಹಸುವಿನ ಮೇಲೆ ಅತ್ಯಾಚಾರವೆಸಗಲಾಗಿದೆ.

ಸ್ಥಳೀಯ ವ್ಯಾಪಾರಿಯೊಬ್ಬರು ಮಧ್ಯಾಹ್ನ 2.30 ರ ವೇಳೆ ಮನೆಗೆ ಹಿಂದಿರುಗುವ ವೇಳೆ ಹಸುವಿನ ಜತೆ ವ್ಯಕ್ತಿಯೊಬ್ಬ ಅಸಹಜವಾಗಿ ವರ್ತಿಸುತ್ತಿರುವುದನ್ನು ನೋಡಿದ್ದಾರೆ. ಅಲ್ಲದೆ ಅಶ್ಲೀಲವಾಗಿಯೂ ನಡೆದುಕೊಳ್ಳುತ್ತಿರುವುದನ್ನು ಗಮನಿಸಿದ್ದಾರೆ.

ಬಳಿಕ ಆತನಿಗೆ ಥಳಿಸಿದ ಮೂರ್ನಾಲ್ಕು ಮಂದಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಸಹಜ ಲೈಂಗಿಕ ಕ್ರಿಯೆ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಆರೋಪಿಯನ್ನು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...