alex Certify
ಕನ್ನಡ ದುನಿಯಾ       Mobile App
       

Kannada Duniya

ಯುವಕನ ಸಾವಿಗೆ ಕಾರಣವಾಯ್ತು ಅನೈತಿಕ ಸಂಬಂಧ

ದಾವಣಗೆರೆ: ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಶಂಕೆಯ ಮೇಲೆ, ಯುವಕನನ್ನು ಮಹಿಳೆಯ ಪತಿ ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಸಿಂಗ್ರಿಹಳ್ಳಿಯ ಬಳಿ ನಡೆದಿದೆ.

28 ವರ್ಷದ ಯುವಕನ ಮೃತದೇಹ ಸಿಂಗ್ರಿಹಳ್ಳಿ ಕೆರೆಯ ಬಳಿ ಪತ್ತೆಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಘಟನೆ ನಡೆದು 8 ದಿನಗಳ ಬಳಿಕ ವ್ಯಕ್ತಿ ಪೊಲೀಸರಿಗೆ ಶರಣಾಗಿದ್ದು, ತನ್ನ ಪತ್ನಿಯೊಂದಿಗೆ ಯುವಕ ಅನೈತಿಕ ಸಂಬಂಧ ಹೊಂದಿದ್ದ ಶಂಕೆಯ ಮೇಲೆ ಹತ್ಯೆ ಮಾಡಿರುವುದಾಗಿ ತಿಳಿಸಿದ್ದಾನೆ.

ಘಟನೆ ನಡೆದ ದಿನದಂದು ಯುವಕನಿಗೆ ಮದ್ಯ ಕುಡಿಸಿ ಕೆರೆಯ ಬಳಿ ಕರೆದೊಯ್ದು ಹತ್ಯೆ ಮಾಡಿದ್ದಾನೆ ಎನ್ನಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...