alex Certify
ಕನ್ನಡ ದುನಿಯಾ       Mobile App
       

Kannada Duniya

ಅನೈತಿಕ ಸಂಬಂಧ ಹೊಂದಿದ್ದವನಿಗೇನಾಯ್ತು..?

fire 456

ಅನೈತಿಕ ಸಂಬಂಧಗಳಿಂದ ಏನೆಲ್ಲಾ ಅನಾಹುತಗಳಾಗುತ್ತವೆ ಎಂಬುದನ್ನು ನೋಡಿರುತ್ತೀರಿ. ಅದೇ ರೀತಿ ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಯುವಕನೊಬ್ಬ ಜೀವನ್ಮರಣದ ನಡುವೆ ಹೋರಾಟ ನಡೆಸಿ ದುರಂತ ಸಾವು ಕಂಡಿದ್ದಾನೆ.

ಹುಮನಾಬಾದ್ ಸಮೀಪದ ಚಿಟಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಯುವಕನೊಬ್ಬ, ತನ್ನ ಮನೆಯ ಸಮೀಪದಲ್ಲೇ ಇದ್ದ ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ದಿನಾಲು ಕತ್ತಲಾಗುತ್ತಲೇ ಆಕೆಯ ಮನೆ ಸೇರಿಕೊಳ್ಳುತ್ತಿದ್ದ. ಇವರಿಬ್ಬರಿಗೆ ಹಲವು ಬಾರಿ ತಿಳಿ ಹೇಳಿದರೂ, ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದ ಆಕ್ರೋಶಗೊಂಡ ಮಹಿಳೆಯ ಮೈದುನ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಯುವಕನನ್ನು ಕೊಲೆ ಮಾಡಿದ್ದಾನೆ.

ಅತ್ತಿಗೆಯೊಂದಿಗೆ ಯುವಕ ಅಕ್ರಮ ಸಂಬಂಧ ಹೊಂದಿದ್ದನ್ನು ಸಹಿಸದೇ, ತನ್ನ ಸ್ನೇಹಿತರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾನೆ. ಆತ ಅತ್ತಿಗೆ ಮನೆಯಲ್ಲಿದ್ದಾಗಲೇ ದಾಳಿ ಮಾಡಿದ್ದು, ಯುವಕನ ಮೇಲೆ ಹಲ್ಲೆ ನಡೆಸಿ ಬೆಂಕಿ ಹಚ್ಚಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ 7 ದಿನಗಳ ನಂತರ ಮೃತಪಟ್ಟಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...