alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರ ಎಸಗಿ, ಮೊಬೈಲ್ ನಲ್ಲಿ ಸೆರೆ

rape th

ನವದೆಹಲಿ: ರಾಜಧಾನಿಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 16 ವರ್ಷದ ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನವದೆಹಲಿಯ ಕಲ್ಕಾಜಿ ಪ್ರದೇಶದ ಫ್ಲ್ಯಾಟ್ ನಿಂದ 16 ವರ್ಷದ ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿಗಳು, ನಂತರ 2 ದಿನಗಳ ಕಾಲ ಕೂಡಿ ಹಾಕಿ, ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ತಮ್ಮ ಮೊಬೈಲ್ ಗಳಲ್ಲಿ ಸೆರೆ ಹಿಡಿದಿದ್ದಾರೆ. ಬಳಿಕ ಬಾಲಕಿಯನ್ನು ದಾರಿ ಮಧ್ಯೆ ಬಿಟ್ಟು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಆಗಸ್ಟ್ 6,7 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ನೀಡಿದ ಹೇಳಿಕೆ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದಾರೆ.

ಬಾಲಕಿಯ ಫ್ಲ್ಯಾಟ್ ಬಳಿ ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು, ಆಕೆಯನ್ನು ಅಪಹರಿಸಿ 2 ದಿನ ಕೂಡಿ ಹಾಕಿದ್ದರು. ಸಾಮೂಹಿಕ ಅತ್ಯಾಚಾರ ಎಸಗಿ, ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿಕೊಂಡಿದ್ದಾರೆ ಎಂದು ಬಾಲಕಿ ಹೇಳಿಕೆ ನೀಡಿದ್ದಾಳೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...