alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿನಿಗೆ ಗರ್ಭಪಾತ ಮಾಡಿಸಲು ಮುಂದಾಗಿದ್ದ ಶಾಲಾ ಆಡಳಿತ ಮಂಡಳಿ

ಡೆಹರಾಡೂನ್ ನ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು ಶಾಲಾ ಆಡಳಿತ ಮಂಡಳಿ ಪ್ರಯತ್ನ ನಡೆಸಿದ್ದು, ತನಿಖೆಯಿಂದ ಬೆಳಕಿಗೆ ಬಂದಿದೆ. ಜತೆಗೆ ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿಗೆ ಗರ್ಭಪಾತ ಮಾಡಿಸಲು ಮುಂದಾದ ಶಾಲಾ ಆಡಳಿತ ಮಂಡಳಿ ಮುಖ್ಯಸ್ಥರು ಈಗ ಬಂಧನಕ್ಕೊಳಗಾಗಿದ್ದಾರೆ.

ಆಗಸ್ಟ್ 14ರಂದು ಶಾಲೆಯ ಆವರಣದಲ್ಲಿ ನಾಲ್ವರು ಸಹಪಾಠಿಗಳಿಂದಲೇ ವಿದ್ಯಾರ್ಥಿನಿ ಅತ್ಯಾಚಾರಕ್ಕೊಳಗಾಗಿದ್ದಳು, 16ರಂದು ಪ್ರಕರಣ ಬೆಳಕಿಗೆ ಬಂದಿತ್ತು. ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿದ್ಯಾರ್ಥಿನಿ ಬೆಂಬಲಿಸಿ ಸಂಸತ್ ಮುಂದೆ ಪ್ರತಿಭಟನೆ ಸಹ ನಡೆದಿದೆ. ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆಂದು ತಿಳಿದ ಶಾಲಾ ಆಡಳಿತ ಮಂಡಳಿ ಗರ್ಭಪಾತ ಮಾಡಿಸಲು ಮುಂದಾಗಿತ್ತು.

ತನಿಖಾಧಿಕಾರಿ ನರೇಶ್ ರಾಥೋಡ್ ಹೇಳುವಂತೆ, ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿನಿಯನ್ನು ಕ್ಲಿನಿಕ್ ಗೆ ಕರೆದೊಯ್ಯಲು ಪ್ರಯತ್ನಿಸಿತ್ತು. ಬಳಿಕ ಪೊಲೀಸರು ತನಿಖೆ ಚುರುಕುಗೊಳಿಸಿ ಶಾಲಾ ನಿರ್ದೇಶಕ, ಆಡಳಿತಾಧಿಕಾರಿ, ಹಾಸ್ಟೆಲ್ ಮುಖ್ಯಸ್ಥರನ್ನು ಬಂಧಿಸಿದ್ದಾರೆ.

ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿ ತನ್ನ ಮೇಲಾದ ಅತ್ಯಾಚಾರದ ಬಗ್ಗೆ ಅದೇ ಶಾಲೆಯಲ್ಲಿ ಓದುತ್ತಿದ್ದ ತನ್ನ ಅಕ್ಕನಿಗೆ ತಿಳಿಸಿದ್ದಾಳೆ. ಬಳಿಕ ಹಾಸ್ಟೆಲ್ ಮುಖ್ಯಸ್ಥರಿಗೆ ಸುದ್ದಿ ಮುಟ್ಟಿಸಿದ್ದಾರೆ. ಅವರು ಶಾಲಾ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದು, ನಂತರ ಆಡಳಿತ ಮಂಡಳಿಯವರು ವಿದ್ಯಾರ್ಥಿನಿಯನ್ನು ಬೆದರಿಸಿ ಗರ್ಭಪಾತ ಮಾಡಿಸಲು ಹೊರಟಿದ್ದರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...