alex Certify
ಕನ್ನಡ ದುನಿಯಾ       Mobile App
       

Kannada Duniya

ರಾತ್ರಿ ಪಾಳಿಯಲ್ಲಿ ವೈದ್ಯ ಮಾಡಿದ ಹೇಯ ಕೃತ್ಯ

ದೆಹಲಿಯ ಬಾರಾ ಹಿಂದೂ ರಾವ್ ಆಸ್ಪತ್ರೆ ವೈದ್ಯನ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯಲ್ಲಿ ಇಂಟರ್ನ್ ಆಗಿ ಕೆಲಸ ಮಾಡ್ತಿರುವ ಯುವತಿ, ವೈದ್ಯನ ವಿರುದ್ಧ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮಂಗಳವಾರ ರಾತ್ರಿ ಘಟನೆ ನಡೆದಿದೆ. ಪೊಲೀಸ್ ಠಾಣೆಗೆ ಬಂದ 25 ವರ್ಷದ ಯುವತಿ ಬಾರಾ ಹಿಂದೂ ರಾವ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ವೈದ್ಯನೊಬ್ಬ ರಾತ್ರಿ ಪಾಳಿಯಲ್ಲಿ ಅತ್ಯಾಚಾರವೆಸಗಿದ್ದಾನೆಂದು ಆರೋಪ ಮಾಡಿದ್ದಾಳೆ. ತಕ್ಷಣ ಯುವತಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ವೈದ್ಯಕೀಯ ವರದಿಯಲ್ಲಿ ಅತ್ಯಾಚಾರ ನಡೆದಿರುವುದು ಸಾಬೀತಾಗಿದೆ.

ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿದ ಪೊಲೀಸರು ವೈದ್ಯನನ್ನು ಬಂಧಿಸಿದ್ದಾರೆ. ಸದ್ಯ ವೈದ್ಯನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಆಸ್ಪತ್ರೆಯಲ್ಲಿರುವ ಸಿಸಿ ಟಿವಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...