alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ನಿ ಸತ್ತ ಮೇಲೆ ರಕ್ಷಕ ತಂದೆಯೇ ರಾಕ್ಷಸನಾದ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪವಿತ್ರ ಸಂಬಂಧಕ್ಕೆ ಕಳಂಕ ತರುವಂತಹ ಘಟನೆ ನಡೆದಿದೆ. ತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ. 10 ವರ್ಷದ ಬಾಲಕಿ ತಂದೆ ನೀಚ ಕೃತ್ಯಕ್ಕೆ ಬಲಿಯಾಗಿದ್ದಾಳೆ. ಪೀಡಿತೆಗೆ ಒಂದರ ಮೇಲೆ ಒಂದು ಆಘಾತವಾಗಿದೆ.

ಕೆಲ ದಿನಗಳ ಹಿಂದಷ್ಟೇ ತಾಯಿ ಸಾವನ್ನಪ್ಪಿದ್ದಳು. ತಾಯಿ ಕಳೆದುಕೊಂಡ ದುಃಖದಲ್ಲಿದ್ದ ಮಗಳು ತಂದೆ ಜೊತೆ ವಾಸವಾಗಿದ್ದಳು. ಆಸರೆಯಾಗಿದ್ದ ತಂದೆಯೇ ರಾಕ್ಷಸನಾಗಿ ಕಾಡಿದ್ದಾನೆ. ಬಾಲಕಿ ತನ್ನ ನೋವನ್ನು ಸ್ನೇಹಿತೆಗೆ ಹೇಳಿದ್ದಳು ಎನ್ನಲಾಗಿದೆ. ಸ್ನೇಹಿತೆ ಶಾಲೆ ಶಿಕ್ಷಕಿಗೆ ವಿಷ್ಯ ತಿಳಿಸಿದ್ದಾಳೆ. ಶಿಕ್ಷಕರು ಪೊಲೀಸರಿಗೆ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಆರೋಪಿ ಮಗಳ ಮೇಲೆ ಅನೇಕ ಬಾರಿ ಅತ್ಯಾಚಾರವೆಸಗಿದ್ದಾನಂತೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕಿ ವೈದ್ಯಕೀಯ ಪರೀಕ್ಷೆ ನಡೆದಿದ್ದು, ವರದಿ ಬಂದ ನಂತ್ರ ಮುಂದಿನ ಕಾರ್ಯಾಚರಣೆ ನಡೆಯಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...