alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್! ವೈದ್ಯನಿಂದಲೇ ಮಕ್ಕಳ ಮಾರಾಟ

ಹೋಮಿಯೋಪತಿ ವೈದ್ಯನೊಬ್ಬ ತನ್ನ ಪತ್ನಿಯೊಂದಿಗೆ ಸೇರಿ ಅವಿವಾಹಿತರಿಗೆ ಜನಿಸಿದ ಮಕ್ಕಳ ಮಾರಾಟ ಮಾಡಿದ್ದ ಪ್ರಕರಣವನ್ನು ಮಹಾರಾಷ್ಟ್ರ ಪೊಲೀಸರು ಬಯಲಿಗೆಳೆದಿದ್ದಾರೆ.

ಕೊಲ್ಲಾಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಅರುಣ್ ಪಾಟೀಲ್ ಎಂಬ ಹೋಮಿಯೋಪತಿ ವೈದ್ಯ ತಲಾ ಎರಡು ಲಕ್ಷ ರೂ. ಗಳಂತೆ ಇಬ್ಬರು ಮಕ್ಕಳನ್ನು ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.

ಅರುಣ್ ಪಾಟೀಲ್, ಅವಿವಾಹಿತ ಮಹಿಳೆಯರಿಗೆ ಹೆರಿಗೆ ಮಾಡಿಸಿದ್ದು, ಕಳೆದ ವರ್ಷದ ಡಿಸೆಂಬರ್ 23 ರಂದು ಚತ್ತೀಸ್ಗಢದ ದಂಪತಿಗೆ 2 ಲಕ್ಷ ರೂ.ಗೆ ಮಗುವನ್ನು ಮಾರಾಟ ಮಾಡಿದ್ದನೆನ್ನಲಾಗಿದೆ. ಮತ್ತೊಂದು ಮಗುವನ್ನು ಮುಂಬೈ ಮೂಲದ ದಂಪತಿಗೆ ಮಾರಾಟ ಮಾಡಿದ್ದು, ಆ ಕುಟುಂಬದ ಮಾಹಿತಿಯನ್ನು ಕಲೆ ಹಾಕಲು ಪೊಲೀಸರು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...