alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರಕ್ಕೆ ಯತ್ನಿಸಿದವನ ಖಾಸಗಿ ಅಂಗ ಕಟ್

ಉತ್ತರ ಪ್ರದೇಶದ ಇಟಾವಾದಲ್ಲಿ ಮಹಿಳೆಯೊಬ್ಬಳು ತನ್ನ ಸೋದರಳಿಯನ ಖಾಸಗಿ ಅಂಗಕ್ಕೆ ಕತ್ತರಿ ಹಾಕಿದ್ದಾಳೆ. ಸೋದರಳಿಯ ಆಕೆ ಅತ್ಯಾಚಾರಕ್ಕೆ ಯತ್ನಿಸಿದ್ದನಂತೆ. ಆತನಿಂದ ರಕ್ಷಣೆ ಪಡೆಯಲು ಖಾಸಗಿ ಅಂಗವನ್ನು ಕತ್ತರಿಸಿರುವುದಾಗಿ ಮಹಿಳೆ ಹೇಳಿಕೆ ನೀಡಿದ್ದಾಳೆ.

ತರಕಾರಿ ಕತ್ತರಿಸುವ ಚಾಕುವಿನಿಂದ ಖಾಸಗಿ ಅಂಗವನ್ನು ಮಹಿಳೆ ಕತ್ತರಿಸಿದ್ದಾಳಂತೆ. ಇಟಾವಾದ ಬಸರೆಹರ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಅತ್ತೆಯನ್ನು ನೋಡಿದ ಸೋದರಳಿಯ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಘಟನೆ ನಂತ್ರ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ.

ದೂರಿನ ಮೇಲೆ ಸ್ಥಳಕ್ಕೆ ಬಂದ ಪೊಲೀಸರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದ ಆರೋಪಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡ ಯುವಕನ ಸ್ಥಿತಿ ಸುಧಾರಿಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...